ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಗುರುವಾರ ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರಿಗೆ ‘ಅಶ್ಲೀಲ’’ ಪದ ಬಳಕೆ ಮಾಡಿದ ಆರೋಪದ ಮೇಲೆ, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ವಿರುದ್ಧ ಹಿರೇಬಾಗೇವಾಡಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ದೂರಿನಲ್ಲಿ ‘ಆಕ್ಷೇಪಾರ್ಹ’ ಪದವನ್ನೂ ಕನ್ನಡದಲ್ಲಿ ಉಲ್ಲೇಖಿಸಿದ್ದಾರೆ. ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರು ಮಧ್ಯಾಹ್ನ 1 ಗಂಟೆಗೆ ದೂರು ನೀಡಿದ್ದಾರೆ. ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 75 ಮತ್ತು 79ರ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.