ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಿಸುವುದರಿಂದ ಮಹಾರಾಷ್ಟ್ರದಲ್ಲಿ ಪ್ರವಾಹ ಎದುರಾದರೆ, ಆ ಪರಿಸ್ಥಿತಿಯನ್ನು ಆಂತರಿಕವಾಗಿ ಅಲ್ಲಿನ ಸರ್ಕಾರ ಸರಿಪಡಿಸಿಕೊಳ್ಳಬೇಕು. ಎತ್ತರ ಹೆಚ್ಚಿಸುವ ಕುರಿತಂತೆ ಕೇಂದ್ರ ಸಚಿವರು ಹಾಗೂ ಪ್ರಧಾನ ಮಂತ್ರಿಯನ್ನು ಭೇಟಿ ಮಾಡಿ ನಾವು ಒತ್ತಡ ಹಾಕಬೇಕು. ಈ ವಿಚಾರದಲ್ಲಿ ಒಗ್ಗಟ್ಟಿನಿಂದ ಧ್ವನಿ ಎತ್ತಬೇಕು. ಈ ಯೋಜನೆಯ ಗೆಜೆಟ್ ಅಧಿಸೂಚನೆಯ ಪ್ರಕಟಣೆಗಾಗಿ 2013ರಿಂದಲೂ ಕಾಯುತ್ತಿದ್ದೇವೆ. ಇನ್ನೆಷ್ಟು ದಿನ ಕಾಯಬೇಕು?