ಮಂಗಳೂರು: ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ 11 ನೇ ವರ್ಷದ ‘ಆಳ್ವಾಸ್ ಪ್ರಗತಿ’ ಉದ್ಯೋಗ ಮೇಳವನ್ನು ಇದೇ 21ಮತ್ತು 22 ರಂದು ಮೂಡುಬಿದಿರೆಯ ವಿದ್ಯಾಗಿರಿ ಆವರಣದಲ್ಲಿಏರ್ಪಡಿಸಲಾಗಿದೆ.

ಪದವಿ ಮತ್ತು ಸ್ನಾತಕೋತ್ತರ ಪದವೀಧರರು, ವೈದ್ಯಕೀಯ ಮತ್ತು ಪ್ಯಾರಾ ಮೆಡಿಕಲ್, ಎಂಜಿನಿಯರಿಂಗ್, ಕಲಾ, ವಾಣಿಜ್ಯ ಹಾಗೂ ಉದ್ಯಮಾಡಳಿತ, ವಿಜ್ಞಾನ, ನರ್ಸಿಂಗ್, ಐಟಿಐ, ಡಿಪ್ಲೊಮಾ, ಪಿಯುಸಿ ಮತ್ತು ಎಸ್ಸೆಸ್ಸೆಲ್ಸಿ ಮತ್ತು ಇತರ ವಿದ್ಯಾರ್ಹತೆಯುಳ್ಳ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ನೋಂದಣಿ ಪ್ರಕ್ರಿಯೆ ಮುಕ್ತವಾಗಿದ್ದು, ಇದೇ 21 ಹಾಗೂ 22 ರಂದೂ ನೋಂದಣಿ ಮಾಡಿಕೊಳ್ಳಬಹುದು. ಉದ್ಯೋಗಾಕಾಂಕ್ಷಿಗಳಿಗೆ ಆನ್ಲೈನ್ ನೋಂದಣಿ ಕಡ್ಡಾಯವಾಗಿದ್ದು, ಆ ಮೂಲಕ ಸಂಗ್ರಹವಾದ ಮಾಹಿತಿಯನ್ನು ನೇಮಕಾತಿ ಪ್ರಕ್ರಿಯೆ ಸುಲಲಿತವಾಗಿ ನಡೆಯಲು ಬಳಸಿಕೊಳ್ಳಲಾಗುವುದು ಎಂದರು.

ಹೊರ ಜಿಲ್ಲೆಗಳಿಂದ ಬರುವ ಉದ್ಯೋಗಾಕಾಂಕ್ಷಿಗಳಿಗೆ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು. ಹೆಚ್ಚಿನ ಮಾಹಿತಿಗೆ 9611686148, 9663190590, 8494934852, 9008907716 ಮತ್ತು ಉಚಿತ ನೋಂದಣಿಗೆ ವೆಬ್ಸೈಟ್ http://alvaspragati.com/CandidateRegistrationPage ಇಲ್ಲಿ ಸಂಪರ್ಕಿಸಬಹುದು. ಉದ್ಯೋಗಾವಕಾಶಗಳ ಮಾಹಿತಿಗಾಗಿ www.alvaspragati.com ಸಂಪರ್ಕಿಸಬಹುದು ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.