ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನವೆಂಬರ್ 16ರಿಂದ 'ಆಳ್ವಾಸ್ ನುಡಿಸಿರಿ'

Last Updated 27 ಆಗಸ್ಟ್ 2018, 19:30 IST
ಅಕ್ಷರ ಗಾತ್ರ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯುವ ಕನ್ನಡ ನಾಡು-ನುಡಿ-ಸಂಸ್ಕೃತಿಯ ರಾಷ್ಟ್ರೀಯ ಸಮ್ಮೇಳನ 'ಆಳ್ವಾಸ್ ನುಡಿಸಿರಿ' 15ನೇ ವರ್ಷದ ಸಮ್ಮೇಳನವು ನವೆಂಬರ್ 16, 17 ಮತ್ತು 18ರಂದು ಇಲ್ಲಿನ ವಿದ್ಯಾಗಿರಿಯ ರತ್ನಾಕರವರ್ಣಿ ವೇದಿಕೆಯಲ್ಲಿ ನಡೆಯಲಿದೆ.

ನವೆಂಬರ್ 16ರಂದು ಶುಕ್ರವಾರ ಬೆಳಿಗ್ಗೆ ಸಮ್ಮೇಳನವು ಉದ್ಘಾಟನೆಗೊಳ್ಳಲಿದ್ದು, 18ರಂದು ಮಧ್ಯಾಹ್ನ ಸಮ್ಮೇಳನವು ಸಮಾರೋಪಗೊಳ್ಳಲಿದೆ.

ಆಸಕ್ತರು ₹100 ಪ್ರತಿನಿಧಿ ಶುಲ್ಕ ನೀಡಿ ಸದಸ್ಯರಾಗಬಹುದು. ವಿದ್ಯಾರ್ಥಿಗಳಿಗೆ ಸಮ್ಮೇಳನದಲ್ಲಿ ಉಚಿತ ಪ್ರವೇಶವಿದೆ. ಹೆಚ್ಚಿನ ವಿವರಗಳಿಗೆ 08258-261229 ಸಂಖ್ಯೆಯನ್ನು ಸಂಪರ್ಕಿಸಬಹುದು. ಕನ್ನಡ ನಾಡು-ನುಡಿ-ಸಂಸ್ಕೃತಿ ಪ್ರಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ 'ಆಳ್ವಾಸ್ ನುಡಿಸಿರಿ 2018' ಅನ್ನು ಯಶಸ್ವಿಗೊಳಿಸಬೇಕಾಗಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಅಳ್ವ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT