ಮಂಗಳವಾರ, 5 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ಯಾಚರಣೆಯಲ್ಲೇ ಜೀವ ತೆತ್ತ ‘ಅರ್ಜುನ’

Published 4 ಡಿಸೆಂಬರ್ 2023, 11:30 IST
Last Updated 4 ಡಿಸೆಂಬರ್ 2023, 12:24 IST
ಅಕ್ಷರ ಗಾತ್ರ

ಮೈಸೂರು: ಕಾರ್ಯಾಚರಣೆಯಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತಿದ್ದ ‘ಅರ್ಜುನ’ ಆನೆ, ಇದೇ ಕಾರ್ಯದಲ್ಲಿ ತೊಡಗಿರುವಾಗಲೇ ಮೃತಪಟ್ಟಿದೆ.

ಈ ಆನೆಯನ್ನು 1968ರಲ್ಲಿ ‘ಖೆಡ್ಡಾ’ ವಿಧಾನದಲ್ಲಿ ಕಾಕನಕೋಟೆ ಅರಣ್ಯ ಪ್ರದೇಶದಲ್ಲಿ ಸೆರೆ ಹಿಡಿಯಲಾಗಿತ್ತು. 23 ವರ್ಷಗಳಿಂದ ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುತ್ತಿತ್ತು. 2012ರಿಂದ 2019ರವರೆಗೆ, ನಾಡಹಬ್ಬದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ (ವಿಜಯದಶಮಿ ಮೆರವಣಿಗೆ)ಯಲ್ಲಿ ಚಿನ್ನದ ಅಂಬಾರಿಯನ್ನು ಹೊರುವ ಜವಾಬ್ದಾರಿಯನ್ನು ನಿರ್ವಹಿಸಿತ್ತು.

65 ವರ್ಷದ ‘ಅರ್ಜುನ’ ಜಿಲ್ಲೆಯ ನಾಗರಹೊಳೆ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ಬಳ್ಳೆ ಶಿಬಿರದಲ್ಲಿ ಇತ್ತು. ದಸರೆಯಿಂದ ನಾಲ್ಕು ವರ್ಷಗಳ ಹಿಂದೆ ನಿವೃತ್ತಿ ನೀಡಲಾಗಿತ್ತು. ಚಿನ್ನದ ಅಂಬಾರಿ ಹೊರದೇ ಇದ್ದರೂ ದಸರೆಯಲ್ಲಿ ಭಾಗಿಯಾಗುತ್ತಿತ್ತು. ಸರಾಸರಿ 5,800 ಕೆ.ಜಿ. ತೂಕದ ಈ ಆನೆಯನ್ನು ಆನೆ, ಹುಲಿ ಸೆರೆ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಳ್ಳಲಾಗುತ್ತಿತ್ತು. ಈಗ ಹಾಸನ ಜಿಲ್ಲೆಯಲ್ಲಿ ಕಾರ್ಯಾಚರಣೆ ವೇಳೆಯೇ ಅದು ಸೋಮವಾರ ಸಾವಿಗೀಡಾಗಿದೆ.

ಈ ಬಾರಿಯ ದಸರಾ ಮೆರವಣಿಗೆಯಲ್ಲಿ, ದಿಕ್ಕು ತೋರುವ ‘ನಿಶಾನೆ ಆನೆ’ಯಾಗಿ ‘ಅರ್ಜುನ’ ಸಾಗಿದ್ದ, ಲಕ್ಷಾಂತರ ಜನರ ಗಮನಸೆಳೆದಿದ್ದ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT