ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಆಗಸ್ಟ್‌ .15: ಅಂಬೇಡ್ಕರ್ ಭಾವಚಿತ್ರ ಕಡ್ಡಾಯ

Published 8 ಜುಲೈ 2024, 16:33 IST
Last Updated 8 ಜುಲೈ 2024, 16:33 IST
ಅಕ್ಷರ ಗಾತ್ರ

ಬೆಂಗಳೂರು: ಆಗಸ್ಟ್‌ 15ರ ಸ್ವಾತಂತ್ರ್ಯ ದಿನಾಚರಣೆಂದು ಸರ್ಕಾರದ ವತಿಯಿಂದ ನಡೆಸುವ ಎಲ್ಲ ಕಾರ್ಯಕ್ರಮಗಳಲ್ಲಿ ಮಹಾತ್ಮ ಗಾಂಧಿ ಅವರ ಭಾವಚಿತ್ರದೊಂದಿಗೆ, ಬಿ.ಆರ್‌.ಅಂಬೇಡ್ಕರ್ ಅವರ ಭಾವಚಿತ್ರವನ್ನೂ ಕಡ್ಡಾಯವಾಗಿ ಇರಿಸಬೇಕು ಎಂದು ರಾಜ್ಯ ಸರ್ಕಾರ ಸೂಚಿಸಿದೆ.

ಎಲ್ಲ ಸರ್ಕಾರಿ ಕಚೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಟ್ಟ ಸಂಸ್ಥೆಗಳು, ಶಾಲಾ ಕಾಲೇಜುಗಳಿಗೂ ಇದು ಅನ್ವಯವಾಗುತ್ತದೆ. ನವೆಂಬರ್ 26ರಂದು ನಡೆಯುವ ಸಂವಿಧಾನದ ದಿನಾಚರಣೆ ಕಾರ್ಯಕ್ರಮಗಳಲ್ಲೂ ಈ ಸೂಚನೆಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸುತ್ತೋಲೆ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT