ದಾವಣಗೆರೆ: ಆಂಬಿಡೆಂಟ್ ಕಂಪನಿಯಿಂದ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್, ಮಾಜಿ ಸಚಿವ ರೋಷನ್ ಬೇಗ್ ಬಹುಕೋಟಿ ಹಣ ಪಡೆದಿದ್ದಾರೆ ಎಂದು ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಆರೋಪಿಸಿದರು.

ಅಧಿಕಾರ ದುರ್ಬಳಕೆ ಮಾಡಿಕೊಂಡು ಜನಾರ್ದನ ರೆಡ್ಡಿ ಅವರನ್ನು ವಿನಾಕಾರಣ ಆಂಬಿಡೆಂಟ್ ಕಂಪನಿಗೆ ಕೊಂಡಿ ಕಲ್ಪಿಸಿ ಜೈಲಿಗೆ ಕಳುಹಿಸಲಾಗಿತ್ತು. ಸರ್ಕಾರಕ್ಕೆ ತಾಕತ್ತಿದ್ದರೆ ಸಿಸಿಬಿ ಮುಂದೆ ಫರೀದ್ ನೀಡಿರುವ ಹೇಳಿಕೆಯನ್ನು ಬಿಡುಗಡೆ ಮಾಡಲಿ ಎಂದು ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಸವಾಲು ಹಾಕಿದರು.

‘ಆಂಬಿಡೆಂಟ್ನಿಂದ ಪರಮೇಶ್ವರ್, ರೋಷನ್ ಬೇಗ್ ಹಣ ಪಡೆದಿರುವುದನ್ನು ತನಿಖೆ ವೇಳೆ ಸಿಸಿಬಿ ಮುಂದೆ ಕಂಪನಿಯ ಫರೀದ್ ಹೇಳಿಕೆ ನೀಡಿದ್ದಾರೆ ಎಂದು ನನಗೆ ಪೊಲೀಸರೇ ತಿಳಿಸಿದ್ದಾರೆ. ಆದರೆ ಸರ್ಕಾರ ಉಳಿಸಿಕೊಳ್ಳಲು ಅವರನ್ನು ಕುಮಾರಸ್ವಾಮಿ ರಕ್ಷಿಸುತ್ತಿದ್ದಾರೆ. ಈ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು’ ಎಂದು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.