ಬೆಂಗಳೂರು: ಮಾದಕ ವಸ್ತುಗಳ ಪರಿಣಾಮಕಾರಿ ನಿಯಂತ್ರಣಕ್ಕಾಗಿ ಕಾನೂನಿಗೆ ತಿದ್ದುಪಡಿ ತರಲು ಸರ್ಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ರಾಜ್ಯ ಕೋಶ, ಆರೋಗ್ಯ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಭಾಗಿತ್ವದಲ್ಲಿ ಮಂಗಳವಾರ ಆಯೋಜಿಸಿದ್ದ ತಂಬಾಕು ಮುಕ್ತ ಯುವ ಅಭಿಯಾನದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಯುವಜನರು ಮಾದಕವಸ್ತುಗಳ ಚಟಕ್ಕೆ ಬಲಿಯಾಗದಂತೆ ದಂಧೆಯನ್ನು ಸಂಪೂರ್ಣ ನಿಗ್ರಹಿಸುವುದೇ ಸರ್ಕಾರದ ಗುರಿ. ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಯುವ ಜನರಲ್ಲಿ ಜಾಗೃತಿ ಮೂಡಿಸಬೇಕು. ಆರೋಗ್ಯಕ್ಕೆ ಮಾರಕವಾದ, ಜೀವಕ್ಕೆ ಕುತ್ತು ತರುವ ಮಾದಕ ವಸ್ತುಗಳನ್ನು ಸೇವಿಸುವುದಿಲ್ಲ ಎಂದು ಯುವಜನರು ಪ್ರತಿಜ್ಞೆ ಮಾಡಬೇಕು. ಮಾಡಿದ ಪ್ರತಿಜ್ಞೆಯನ್ನು ಅಕ್ಷರಶಃ ಪಾಲಿಸಬೇಕು ಎಂದರು.

ತಂಬಾಕು ಸೇವಿಸುವ ಶೇ 50ರಷ್ಟು ಜನರಿಗೆ ಕ್ಯಾನ್ಸರ್:

ವಿಶ್ವ ಆರೋಗ್ಯ ಸಂಸ್ಥೆಯ ವರದಿಯಂತೆ ಭಾರತದಲ್ಲಿ ಪ್ರತಿ ವರ್ಷ 13.5 ಲಕ್ಷ ಜನರು ತಂಬಾಕು ಸೇವನೆಯಿಂದ ಮೃತಪಡುತ್ತಿದ್ದಾರೆ. ತಂಬಾಕು ಸೇವಿಸುವ ಶೇ 50ರಷ್ಟು ಜನರಲ್ಲಿ ಕ್ಯಾನ್ಸರ್ ಕಾಣಿಸಿಕೊಳ್ಳುತ್ತಿದೆ ಎಂದರು.

ಬೆಂಗಳೂರು, ಮಂಗಳೂರು, ಮೈಸೂರು, ಹುಬ್ಬಳ್ಳಿ–ಧಾರವಾಡದಲ್ಲಿ ಮಾದಕ ವಸ್ತುಗಳ ಮಾರಾಟ, ಸೇವನೆ ಹಾವಳಿ ಹೆಚ್ಚಾಗಿದೆ. ನಿಯಂತ್ರಣಕ್ಕೆ ಈಗಾಗಲೇ ಗೃಹ ಸಚಿವರ ಅಧ್ಯಕ್ಷತೆಯಲ್ಲಿ ಟಾಸ್ಕ್ಪೋರ್ಸ್ ರಚಿಸಲಾಗಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.