ಬೆಂಗಳೂರು: ಮಹಾನ್ ಭಾಷೆ ಕನ್ನಡದಲ್ಲಿ ಮಾತನಾಡಲು ನನಗೆ ಆಗದೇ ಇರುವುದಕ್ಕೆ ನಿಮ್ಮೆಲ್ಲರ ಕ್ಷಮೆ ಕೇಳುತ್ತೇನೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.

ನೆಲಮಂಗಲ ತಾಲ್ಲೂಕಿನ ನಗರೂರಿನಲ್ಲಿ ಆದಿಚುಂಚನಗಿರಿ ವಿಶ್ವ ವಿದ್ಯಾಲಯದ ಅಡಿಯಲ್ಲಿ ಬಿಜಿಎಸ್ ಎಂಸಿಎಚ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯನ್ನು ಶುಕ್ರವಾರ ಉದ್ಘಾಟನೆ ಮಾಡಿ ಮಾತನಾಡಿದರು.

ಅಮಿತ್ ಶಾ ಅವರ ಮಾತನ್ನು ಕಾರ್ಯಕ್ರಮದ ನಿರೂಪಕರು ಕನ್ನಡಕ್ಕೆ ಅನುವಾದಿಸಿದರು.

ಕನ್ನಡ ಮಾತನಾಡಲು ಸಾಧ್ಯವಾಗದೆ ಶಾ ಅವರು ಕ್ಷಮೆ ಕೇಳುತ್ತಿದ್ದಂತೆ ನೆರೆದಿದ್ದ ಜನ ಚಪ್ಪಾಳೆ ತಟ್ಟಿ, ಅವರ ಕ್ಷಮೆಯನ್ನು ಸ್ವಾಗತಿಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.