ಮುಕ್ಕಾಲು ಗಂಟೆ ಕಾಲ ನಡೆದ ಈ ಸಭೆಯಲ್ಲಿ ಗೃಹ ಸಚಿವರ ಜತೆ ಎಲ್ಲಾ ವಿಷಯಗಳನ್ನು ಮುಕ್ತವಾಗಿ ಚರ್ಚೆ ಮಾಡಿದ್ದೇನೆ. ಕೇಂದ್ರದಲ್ಲಿ ಎನ್‌ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬಂದು ಮತ್ತೊಮ್ಮೆ ನರೇಂದ್ರ ಮೋದಿ ಅವರು ಪ್ರಧಾನಿ ಆಗಬೇಕು. ಈ ಬಗ್ಗೆ ಜೆಡಿಎಸ್ ಮತ್ತು ಬಿಜೆಪಿ ಒಟ್ಟಾಗಿ ಕೆಲಸ ಮಾಡುವ ಬಗ್ಗೆ ಮಾತುಕತೆ ನಡೆಸಿದ್ದೇವೆ.