ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮಿತ್ ಶಾ ಸಭೆ ರದ್ದು: ಸುತ್ತೂರಿಗಷ್ಟೇ ಭೇಟಿ

Published 8 ಫೆಬ್ರುವರಿ 2024, 16:18 IST
Last Updated 8 ಫೆಬ್ರುವರಿ 2024, 16:18 IST
ಅಕ್ಷರ ಗಾತ್ರ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಕರ್ನಾಟಕ ಭೇಟಿ ಕಾರ್ಯಕ್ರಮದಲ್ಲಿ ಕೊಂಚ ಬದಲಾವಣೆ ಆಗಿದ್ದು, ಇದೇ 11 ರಂದು ಬೆಳಿಗ್ಗೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ಸಂಜೆ ಸುತ್ತೂರು ಜಾತ್ರೆಯಲ್ಲಿ ಭಾಗವಹಿಸಲಿದ್ದಾರೆ. 

ಲೋಕಸಭಾ ಚುನಾವಣೆ ತಯಾರಿ ಕುರಿತು ಬೆಂಗಳೂರಿನಲ್ಲಿ ಸಭೆ ನಡೆಸುವುದಾಗಿ ಈ ಹಿಂದೆ ಪಕ್ಷದ ಮೂಲಗಳು ಹೇಳಿದ್ದವು. ಕಾರ್ಯಕ್ರಮ ಬದಲಾಗಿರುವುದರಿಂದ ಬೆಂಗಳೂರಿನಲ್ಲಿ ಸಭೆ ನಡೆಯುವುದಿಲ್ಲ.

‘ಶಾ ಅವರು ಇದೇ 10 ರ ರಾತ್ರಿ ಬೆಂಗಳೂರಿಗೆ ಬಂದು ನೇರವಾಗಿ ಮೈಸೂರಿಗೆ ಹೋಗಿ ಅಲ್ಲೇ ವಾಸ್ತವ್ಯ ಹೂಡಲಿದ್ದಾರೆ. 11 ರಂದು ಬೆಳಿಗ್ಗೆ ಚಾಮುಂಡಿ ಬೆಟ್ಟ ಭೇಟಿಯ ಬಳಿಕ ಮೈಸೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಾರೆ. ಪಕ್ಷದ ಕಾರ್ಯಕರ್ತರ ಸಭೆಯಲ್ಲೂ ಭಾಗವಹಿಸಲಿದ್ದಾರೆ’ ಎಂದು ಬಿಜೆ‍ಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT