ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮಿತ್‌ ಶಾ ಬಗ್ಗೆ ಹೇಳಿಕೆ: ಯತೀಂದ್ರ ಹೇಳಿಕೆಗೆ ಬಿಜೆಪಿ ಆಕ್ರೋಶ

Published 29 ಮಾರ್ಚ್ 2024, 15:14 IST
Last Updated 29 ಮಾರ್ಚ್ 2024, 15:14 IST
ಅಕ್ಷರ ಗಾತ್ರ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಗೂಂಡಾ ಎಂದು ಟೀಕಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರ ವಿರುದ್ಧ ಬಿಜೆಪಿ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಮಾತನಾಡಿ, ಮುಖ್ಯಮಂತ್ರಿ ಮಗನಾಗಿ, ಮಾಜಿ ಶಾಸಕರಾಗಿ ಯತೀಂದ್ರ ಅವರ ಹೇಳಿಕೆ ಖಂಡನೀಯ. ತಕ್ಷಣ ಅವರು ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ಗೂಂಡಾ ಸಂಸ್ಕೃತಿ ಯಾರದು ಎಂದು ಹೇಳಿದರೆ ಕಲಬುರಗಿಯಿಂದ ಮೈಸೂರುವರೆಗೂ ಜನರು ಹೇಳುತ್ತಾರೆ. ಲೋಕಸಭಾ ಚುನಾವಣೆಯ ಸೋಲಿನ ಭೀತಿಯಿಂದ ಕಾಂಗ್ರೆಸ್‌ ಮುಖಂಡರು ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದರು.

ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ ಮಾತನಾಡಿ, ಯತೀಂದ್ರ ಹೀಗೆ  ಮಾತನಾಡುತ್ತಿದ್ದರೆ ರಾಹುಲ್‌ ಗಾಂಧಿಯಂತೆ ಜೈಲಿಗೆ ಹೋಗುವ ಸ್ಥಿತಿ ಬರಲಿದೆ ಎಂದರು. 

ಮೈಸೂರಿನ ರಾಜಕಾರಣದ ಬಗ್ಗೆ ಮಾತನಾಡಲು ಯೋಗ್ಯತೆ ಇಲ್ಲದವರು ರಾಷ್ಟ್ರ ನಾಯಕರ ಬಗ್ಗೆ ಮಾತನಾಡಿ ದೊಡ್ಡ ವ್ಯಕ್ತಿಯಾಗುವ ಕನಸು ಕಾಣುತ್ತಿದ್ದಾರೆ. ಹತಾಶ ಮನೋಭಾವ, ಬುದ್ಧಿಭ್ರಮಣೆಯಿಂದ ಮಾತನಾಡಿದ್ದಾರೆ. ಇಂತಹ ಬಾಲಿಶ ಹಾಗೂ ಕೊಬ್ಬಿನ ಹೇಳಿಕೆ ನೀಡುವುದು ಕಾಂಗ್ರೆಸ್‌ ಡಿಎನ್‌ಎನಲ್ಲೇ ಇದೆ ಎಂದು ಟೀಕಿಸಿದರು.

ಯತೀಂದ್ರ ಅವರಿಗೆ ತಮ್ಮ ತಂದೆಯ ಗೂಂಡಾಗಿರಿ ಮಾತ್ರ ಕಣ್ಣಿಗೆ ಕಾಣುತ್ತಿಲ್ಲ. ರಾಜ್ಯದಲ್ಲೀಗ ಅಪ್ಪ-ಮಕ್ಕಳ ಗೂಂಡಾಗಿರಿ ಇದೆ. ಸದನದಲ್ಲಿ ಪೊಲೀಸರನ್ನು ಬೆದರಿಸುವುದು, ವಿಧಾನಸಭಾಧ್ಯಕ್ಷರಿಗೆ ಬೆದರಿಕೆ ಹಾಕುವುದು, ಮಹಿಳೆಯರ ಮೇಲೆ ದೌರ್ಜನ್ಯ ಮಾಡುವುದು, ಕಾರ್ಯಕರ್ತರ ಕಪಾಳಕ್ಕೆ ಹೊಡೆಯುವುದು... ಹೀಗೆ ಸಿದ್ದರಾಮಯ್ಯ ಮಾಡಿದ ರೌಡಿಸಂಗೆ ಲೆಕ್ಕವೇ ಇಲ್ಲ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT