ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂವಿಧಾನದ ಬಗ್ಗೆ ಹೆಗಡೆ ಹೇಳಿಕೆ ವೈಯಕ್ತಿಕ, ಪಕ್ಷದ ನಿಲುವಲ್ಲ: ಬಿಜೆಪಿ

Published 10 ಮಾರ್ಚ್ 2024, 14:42 IST
Last Updated 10 ಮಾರ್ಚ್ 2024, 14:42 IST
ಅಕ್ಷರ ಗಾತ್ರ

ಬೆಂಗಳೂರು: ‘ಸಂವಿಧಾನದ ಕುರಿತಂತೆ ಸಂಸದ ಅನಂತಕುಮಾರ್ ಹೆಗಡೆಯವರು ನೀಡಿದ ಹೇಳಿಕೆಗಳು ಅವರ ವೈಯಕ್ತಿಕ ಅಭಿಪ್ರಾಯವಾಗಿದ್ದು, ಪಕ್ಷದ ನಿಲುವನ್ನು ಪ್ರತಿಬಿಂಬಿಸುವುದಿಲ್ಲ’ ಎಂದು ಬಿಜೆಪಿ ಸ್ಪಷ್ಟಪಡಿಸಿದೆ.

‘ಸಂವಿಧಾನಕ್ಕೆ ತಿದ್ದುಪಡಿ ತರಬೇಕಾದರೆ ಲೋಕಸಭೆಯಲ್ಲಿ ಬಿಜೆಪಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕಿದೆ’ ಎಂದು ಸಿದ್ದಾಪುರ ತಾಲೂಕಿನ ಹಲಗೇರಿಯ ಬಿಜೆಪಿ ಮಹಾಶಕ್ತಿ ಕೇಂದ್ರದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವ ವೇಳೆ ಸಂಸದ ಅನಂತಕುಮಾರ್ ಹೆಗಡೆ ಹೇಳಿದ್ದರು. ಈ ಹೇಳಿಕೆಗೆ ಬಾರಿ ವಿರೋಧ ವ್ಯಕ್ತವಾಗಿತ್ತು.

ಈ ಬಗ್ಗೆ ಎಕ್ಸ್‌ನಲ್ಲಿ ಸ್ಪಷ್ಟನೆ ನೀಡಿರುವ ಬಿಜೆಪಿ, ‘ಸಂವಿಧಾನವನ್ನು ಎತ್ತಿಹಿಡಿಯುವ ಪಕ್ಷದ ಅಚಲ ಬದ್ಧತೆಯನ್ನು ನಾವು ಪುನರುಚ್ಚರಿಸುತ್ತೇವೆ. ಹೇಳಿಕೆಗೆ ಸಂಬಂಧಿಸಿದಂತೆ ಹೆಗಡೆ ಅವರಲ್ಲಿ ವಿವರಣೆ ಕೇಳಲಾಗುವುದು’ ಎಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT