ಯಾದಗಿರಿ/ಗುರುಮಠಕಲ್: ಗುರುಮಠಕಲ್ ತಾಲ್ಲೂಕಿನ ಅನಪುರ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ನರಸಮ್ಮ ಯಲ್ಲಪ್ಪ (75) ಎಂಬುವರು ಬುಧವಾರ ರಾತ್ರಿ ಯಾದಗಿರಿ ಜಿಲ್ಲಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಇದರೊಂದಿಗೆ ಮೃತರ ಸಂಖ್ಯೆ
ಮೂರಕ್ಕೆ ಏರಿಕೆಯಾಗಿದೆ. ಮೂರು ದಿನಗಳಲ್ಲಿ ಗ್ರಾಮದ ಒಟ್ಟು 66 ಮಂದಿ ವಾಂತಿ ಭೇದಿಯಿಂದ ಅಸ್ವಸ್ಥಗೊಂಡಿದ್ದಾರೆ.

ಅಸ್ವಸ್ಥ ಗ್ರಾಮಸ್ಥರಿಗೆ ಗ್ರಾಮದ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ನಂತರ ಆಸ್ಪತ್ರೆಗೆ ದಾಖಲಿಸಲಾಗುತ್ತಿದೆ.

‘ಜಿಲ್ಲಾ ಆಸ್ಪತ್ರೆ, ತೆಲಂಗಾಣದ ನಾರಾಯಣಪೇಟ ಮತ್ತು ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಅಸ್ವಸ್ಥರಿಗೆ ಚಿಕಿತ್ಸೆ ಮುಂದು
ವರೆದಿದೆ. ಈ ಎಲ್ಲದ್ದಕ್ಕೂ ಕಲುಷಿತ ನೀರು ಅಥವಾ ಕಳಪೆ ಆಹಾರ ಕಾರಣವೇ ಎಂಬುದು ಸ್ಪಷ್ಟವಾಗುತ್ತಿಲ್ಲ. ಎಲ್ಲ ಜಲ
ಮೂಲಗಳ ಪರಿಶೀಲನೆ ನಡೆಸಿ ದ್ದೇವೆ’ ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ‘ಪ್ರಜಾವಾಣಿ’ಗೆ ತಿಳಿಸಿದರು.

‘ಅನಪುರಕ್ಕೆ ಪೂರೈಕೆಯಾಗುವನೀರು ಕುಡಿಯಲು ಯೋಗ್ಯವಲ್ಲ ಎಂದು ಯಾದಗಿರಿಯ ಪ್ರಯೋಗಾಲಯವು ವರದಿ ನೀಡಿದೆ. ನೀರಿನಲ್ಲಿ ಯಾವ ಬ್ಯಾಕ್ಟೀರಿಯ ಇದೆ ಎಂಬುದನ್ನು ತಿಳಿಯಲು, ನೀರನ್ನು ರಾಯಚೂರು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ’ ಎಂದು ಯಾದಗಿರಿ ತಾಲ್ಲೂಕು ವೈದ್ಯಾಧಿಕಾರಿ ಡಾ.ಹಣಮಂತ ರೆಡ್ಡಿರವರು ಮಾಹಿತಿ ನೀಡಿದರು.

‘ಗ್ರಾಮಕ್ಕೆ ಪೂರೈಕೆಯಾಗುವ ಐದೂ ಕೊಳವೆಬಾವಿಗಳ ನೀರಿನ ಶುದ್ಧತೆ ಪರೀಕ್ಷಿಸಲು ಮತ್ತೊಮ್ಮೆ ಪ್ರಯೋಗಾಲಯಕ್ಕೆ ಕಳುಹಿಸಿದ್ದೇವೆ’ ಎಂದು ಗ್ರಾಮೀಣ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಸತೀಶ ಗುಡಿಗೆನವರ್ ತಿಳಿಸಿದರು.

ಪರಿಹಾರ ಭರವಸೆ:

ಗುರುಮಠಕಲ್ ತಾಲ್ಲೂಕಿನ ಅನಪುರದಲ್ಲಿ ಕಲುಷಿತ ನೀರು ಕುಡಿದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ವಿಧಾನಸಭೆಯಲ್ಲಿ ಶೂನ್ಯವೇಳೆಯಲ್ಲಿ ಜೆಡಿಎಸ್‌ನ ನಾಗನಗೌಡ ಕಂದಕೂರು ಅವರ ಪ್ರಶ್ನೆಗೆ ಉತ್ತರಿಸಿ, ಎಷ್ಟು ಪರಿಹಾರ ನೀಡಬೇಕು ಎಂಬುದನ್ನು ಮುಖ್ಯಮಂತ್ರಿಯವರ ಜತೆ ಚರ್ಚಿಸಲಾಗುವುದು ಎಂದರು.

‘ಈ ಪ್ರಕರಣದಲ್ಲಿ ಮೂವರು ಮೃತಪಟ್ಟಿದ್ದಾರೆ. 58 ಮಂದಿ ಅಸ್ವಸ್ಥಗೊಂಡಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ. ಪರಿಸ್ಥಿತಿ ಗಂಭೀರವಾಗಿ ಇರುವವರಿಗೆ ಹೆಚ್ಚಿನ ಚಿಕಿತ್ಸೆ ಕೊಡಿಸಲು ವ್ಯವಸ್ಥೆ ಮಾಡಲಾಗುವುದು’ ಎಂದೂ ಜ್ಞಾನೇಂದ್ರ ಭರವಸೆ ನೀಡಿದರು.

ಈ ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್‌ನ ಉಪನಾಯಕ ಯು.ಟಿ. ಖಾದರ್ ಮತ್ತು ಪ್ರಿಯಾಂಕ್ ಖರ್ಗೆ ಆಗ್ರಹಿಸಿದರು.

ವಿಷಯ ಪ್ರಸ್ತಾಪಿಸಿದ ನಾಗನಗೌಡ ಕಂದಕೂರ, ‘ಅನಪುರ ಗ್ರಾಮದಲ್ಲಿ ನೀರು ಸೇವಿಸಿ ಮೂವರು ಮೃತಪಟ್ಟಿದ್ದು, ಸಾಕಷ್ಟು ಮಂದಿ ಅಸ್ವಸ್ಥರಾಗಿದ್ದಾರೆ. ತೆಲಂಗಾಣದ ಮೆಹಬೂಬ್ ನಗರ, ನಾರಾಯಣ ಪೇಟೆ ಮತ್ತು ಯಾದಗಿರಿ ಜಿಲ್ಲೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನೀರಿನ ಪೈಪ್‌ನಲ್ಲಿ ಕಲುಷಿತ ನೀರು ಸೇರಿ ಈ ದುರಂತ ನಡೆದಿದೆ. ಸೂಕ್ತ ಪರಿಹಾರ ನೀಡಬೇಕು’ ಎಂದರು.

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಮಾತನಾಡಿ, ‘ಅಸ್ವಸ್ಥರಾದವರನ್ನು ತೆಲಂಗಾಣದ ಆಸ್ಪತ್ರೆಗೆ ಒಯ್ಯಲಾಗಿದೆ ಎಂದರೆ, ರಾಜ್ಯದಲ್ಲಿ ಆರೋಗ್ಯ ಕ್ಷೇತ್ರದ ಸ್ಥಿತಿಗತಿ ಹೇಗಿದೆ ಎಂಬುದನ್ನು ಊಹಿಸಬಹುದು‘ ಎಂದು ಲೇವಡಿ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.