ಆನೇಕಲ್: ತಾಲ್ಲೂಕಿನ ಇಂಡ್ಲವಾಡಿ ಯಲ್ಲಿ ಶನಿವಾರ ನಡೆದ ಅಂತರರಾಷ್ಟ್ರೀಯ ಕ್ರೀಡಾಂಗಣದ ಭೂಮಿಪೂಜೆ ಕಾರ್ಯಕ್ರಮದಲ್ಲಿ ಶಾಸಕ ಬಿ.ಶಿವಣ್ಣ ಅವರಿಗೆ ಸಚಿವ ನೀಡಬೇಕೆಂದು ಕಾರ್ಯಕರ್ತರು ಘೋಷಣೆ ಕೂಗಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಷಣದ ವೇಳೆ ಕೆಲ ಕಾರ್ಯಕರ್ತರು ಫಲಕ ಹಿಡಿದು ಮಂತ್ರಿ ಸ್ಥಾನ ಕೊಡಲೇಬೇಕೆಂದು ಆಗ್ರಹಿಸಿದರು. ಕೋಪಗೊಂಡ ಸಿದ್ದರಾಮಯ್ಯ ಗದರಿದರು. ಭಾಷಣದ ವೇಳೆ ಗದ್ದಲ ಮಾಡುವುದು ಸರಿಯಲ್ಲ ಎಂದು ಸಿಡಿಮಿಡಿಗೊಂಡರು.

ಕ್ರೀಡಾಂಗಣ ನಿರ್ಮಾಣವಾಗಲು ಶಾಸಕ ಬಿ.ಶಿವಣ್ಣ ಮತ್ತು ಬಮುಲ್ ಅಧ್ಯಕ್ಷ ಡಿ.ಕೆ.ಸುರೇಶ್ ಪ್ರಮುಖ ಪಾತ್ರ ವಹಿಸಿದ್ದಾರೆ. ಪತ್ರ ವ್ಯವಹಾರ, ಆಡಳಿತಾತ್ಮಕ ಅನುಮೋದನೆಗೆ ಹೆಚ್ಚು ಒತ್ತು ನೀಡಿದರು. ಅಂತರರಾಷ್ಟ್ರೀಯ ಕ್ರೀಡಾಂಗಣ ಇವರಿಬ್ಬರ ಕನಸಿನ ಕೂಸು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ವಸತಿ ಸಚಿವ ಜಮೀರ್ ಅಹಮದ್ ಖಾನ್ ಮುಕ್ತ ಕಂಠದಿಂದ ಶ್ಲಾಘಿಸಿದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಭಾಷಣದಲ್ಲಿ ‘ತಮಗೆ ಗಣೇಶನ ವಿಗ್ರಹ ನೀಡುವ ಮೂಲಕ ವಿಘ್ನ ನಿವಾರಕನನ್ನೇ ಉಡುಗೊರೆಯಾಗಿ ನೀಡಿದ್ದಾರೆ’ ಎಂದು ಹೇಳಿದರು. ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗೆ ಬೆಳ್ಳಿ ಗದೆ ನೀಡಿ ಸತ್ಕರಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.