ಶುಕ್ರವಾರ, 29 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಶುಪಾಲನ ಕೇಂದ್ರಗಳಲ್ಲಿ ತರಗತಿ ಪ್ರಾರಂಭಕ್ಕೆ ವಿರೋಧ

Published 23 ಆಗಸ್ಟ್ 2023, 16:24 IST
Last Updated 23 ಆಗಸ್ಟ್ 2023, 16:24 IST
ಅಕ್ಷರ ಗಾತ್ರ

ಬೆಂಗಳೂರು: ಅಂಗನವಾಡಿ ಕೇಂದ್ರಗಳಿಗೆ ಪರ್ಯಾಯವಾಗಿ ಶಿಶುಪಾಲನ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸಲು ಮುಂದಾಗಿರುವ ಸರ್ಕಾರದ ನಡೆಯನ್ನು ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್‌ ಖಂಡಿಸಿದೆ.

‘ರಾಜ್ಯದ 262 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾಯೋಗಿಕವಾಗಿ ಪ್ರಾರಂಭಿಸುವಂತೆ ಶಾಲಾ ಶಿಕ್ಷಣ ಇಲಾಖೆಯ ಸಮಗ್ರ ಶಿಕ್ಷಣ ಕರ್ನಾಟಕ ಸುತ್ತೋಲೆ ಹೊರಡಿಸಿದೆ. ಹೀಗೆ ಮಾಡುವ  ಮೂಲಕ ಅಂಗನವಾಡಿ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಹುನ್ನಾರ ನಡೆಸುತ್ತಿದೆ’ ಎಂದು ಫೆಡರೇಷನ್‌ ಅಧ್ಯಕ್ಷ  ಬಿ. ಅಮ್ಜದ್‌ ದೂರಿದರು.

‘ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಡಿಯಲ್ಲಿ ಅಂಗನವಾಡಿ ಕೇಂದ್ರಗಳ ಮೂಲಕ ಶೂನ್ಯದಿಂದ 6 ವರ್ಷದ ವಯೋಮಾನದ ಮಕ್ಕಳು ಮತ್ತು ಗರ್ಭಿಣಿ ಬಾಣಂತಿಯರಿಗೆ ಪೂರಕ ಪೌಷ್ಟಿಕ ಆಹಾರ ನೀಡಲಾಗುತ್ತಿದೆ. ಜತೆಗೆ ಆರೋಗ್ಯ, ಶಾಲಾ ಪೂರ್ವ ಶಿಕ್ಷಣ ಇತ್ಯಾದಿ ಸೇವೆಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಿಕೊಂಡು ಬರಲಾಗುತ್ತಿದೆ. ಆದರೆ, ಅಂಗನವಾಡಿಗಳನ್ನು ಶಿಶುಪಾಲನ ಕೇಂದ್ರಗಳನ್ನಾಗಿ ಪ್ರಾರಂಭಿಸಲಾಗುತ್ತಿದೆ. ಇದರಿಂದ, ಅಂಗನವಾಡಿ ಕೇಂದ್ರಗಳಲ್ಲಿ ದಾಖಲಾಗುವ ಮಕ್ಕಳ ಸಂಖ್ಯೆ ಕುಸಿಯಲಿದೆ’ ಎಂದು ಕಳವಳ ವ್ಯಕ್ತಪಡಿಸಿದರು.

‘ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ ತರಗತಿಗಳನ್ನು ಪ್ರಾರಂಭಿಸಿ ಆ ಮಕ್ಕಳಿಗೆ ಸಮವಸ್ತ್ರ, ಪಠ್ಯ–ಪುಸ್ತಕಗಳನ್ನು ನೀಡಬೇಕೆಂಬ ಬೇಡಿಕೆ ಇದುವರೆಗೂ ಈಡೇರಿಲ್ಲ. ಆದರೆ, ಸರ್ಕಾರ ಯಾವುದೇ ಚರ್ಚೆ, ಸಮಾಲೋಚನೆ ನಡೆಸದೇ ಶಿಶುಪಾಲನ ಕೇಂದ್ರಗಳನ್ನು ಪ್ರಾರಂಭಿಸುತ್ತಿದೆ. ಇದರಿಂದ, ಅಂಗನವಾಡಿ ಕೇಂದ್ರಗಳ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ’ ಎಂದು ಫೆಡರೇಷನ್ ಪ್ರಧಾನ ಕಾರ್ಯದರ್ಶಿ ಎಂ. ಜಯಮ್ಮ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT