ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಗನವಾಡಿ ಕಾರ್ಯಕರ್ತೆಯ ಬೇಡಿಕೆ ಹಂತ ಹಂತವಾಗಿ ಈಡೇರಿಕೆ– ಸಿಎಂ ಸಿದ್ದರಾಮಯ್ಯ

Published 11 ಮಾರ್ಚ್ 2024, 16:34 IST
Last Updated 11 ಮಾರ್ಚ್ 2024, 16:34 IST
ಅಕ್ಷರ ಗಾತ್ರ

ಬೆಂಗಳೂರು: ‘ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರು ಮತ್ತು ಅಂಗವಿಕಲರ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲು ಪ್ರಯತ್ನಿಸಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ತಮ್ಮನ್ನು ಭೇಟಿ ಮಾಡಿದ ಅಂಗನವಾಡಿ ಮತ್ತು ಅಂಗವಿಕಲರ ಸಂಘಟನೆಗಳ ನಿಯೋಗಕ್ಕೆ ಮುಖ್ಯಮಂತ್ರಿ ಈ ಭರವಸೆ ನೀಡಿದರು.

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಗೌರವ ಧನವ ಹೆಚ್ಚಿಸಬೇಕೆಂದು ವಿವಿಧ ಸಂಘಟನೆಗಳ ಮುಖಂಡರು ಒತ್ತಾಯಿಸಿದರು. ಕೇಂದ್ರದಿಂದ ಅನುದಾನ ಬಾರದೇ ಇರುವುದರಿಂದ ಆಗುತ್ತಿರುವ ಸಮಸ್ಯೆಗಳನ್ನು ಮುಖ್ಯಮಂತ್ರಿಯ ಮುಂದಿಟ್ಟ ಕಾರ್ಯಕರ್ತೆಯರು, ನೆರವು ನೀಡುವಂತೆ ಮನವಿ ಮಾಡಿದರು.

ಅಂಗನವಾಡಿ ಕೇಂದ್ರಗಳಿಗೆ ಉಚಿತ ವಿದ್ಯುತ್ ನೀಡಬೇಕೆಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮುಖ್ಯಮಂತ್ರಿಗೆ ಮನವಿ ಮಾಡಿದರು. ಅಂಗನವಾಡಿ ಕಾರ್ಯಕರ್ತೆಯರ ಸಹಾಯಧನವನ್ನು ₹ 1 ಸಾವಿರ ಹೆಚ್ಚಿಸುವಂತೆ ಕೋರಿದರು. ಅದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ‘ಮುಂದಿನ ದಿನಗಳಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು’ ಎಂದರು.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ನೇತೃತ್ವದಲ್ಲಿ 20ಕ್ಕೂ ಹೆಚ್ಚು ಸಂಘಟನೆಗಳ ಪದಾಧಿಕಾರಿಗಳು ಮುಖ್ಯಮಂತ್ರಿ ಜತೆಗೆ ಚರ್ಚಿಸಿದರು.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗೃಹ ಸಚಿವ ಜಿ. ಪರಮೇಶ್ವರ, ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮುಖ್ಯಮಂತ್ರಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಸಿಐಟಿಯು ಅಧ್ಯಕ್ಷೆ ವರಲಕ್ಷ್ಮಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT