ನವದೆಹಲಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರ ಪ್ರಮುಖರು ಕೇಂದ್ರದ ಮೂವರು ಸಚಿವರಿಗೆ ಬುಧವಾರ ಮನವಿ ಸಲ್ಲಿಸಿದರು.

ಸಂಘಟನೆಯ ಪ್ರಮುಖರ ಜತೆಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ನವದೆಹಲಿಯ ತಮ್ಮ ಗೃಹ ಕಚೇರಿಯಲ್ಲಿ ಬುಧವಾರ ಮಾತುಕತೆ ನಡೆಸಿದರು.

ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಂಡ್ಯ ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರ ಪ್ರಮುಖರನ್ನು ಬುಧವಾರ ನವದೆಹಲಿಗೆ ಕರೆಸಿ ಕೊಂಡು ಸಚಿವರು ಚರ್ಚಿಸಿದರು. ನಂತರ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಭೇಟಿಗೆ ಸಮಯ ನಿಗದಿಗೊಳಿ ಸಿದರು. ಬಳಿಕ ಪ್ರಮುಖರು ಶಿಕ್ಷಣ ಸಚಿವರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಅನ್ನಪೂರ್ಣ ದೇವಿ ಅವರಿಗೆ ಸಂಘದ ಪ್ರಮುಖರು ಮನವಿ ನೀಡಿದರು. ಅಂಗನವಾಡಿ ನೌಕರರ ಸಂಘದ ಎಸ್. ವರಲಕ್ಷ್ಮಿ, ಕೋಲಾರ ಸಂಸದ ಎಂ.ಮಲ್ಲೇಶಬಾಬು ಮತ್ತಿತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.