ಬೆಂಗಳೂರು: ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರು ಕರ್ನಾಟಕ ರಾಜ್ಯ ಅರಣ್ಯ ಇಲಾಖೆ ಮತ್ತು ವನ್ಯಜೀವಿ ಸಂರಕ್ಷಣಾ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ.

ಕರ್ನಾಟಕ ವನ್ಯಜೀವಿ ಮಂಡಳಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವ ಇರುವ ಅನಿಲ್ ಕುಂಬ್ಳೆ ದೇಶ, ವಿದೇಶಗಳಲ್ಲೂ ಖ್ಯಾತಿ ಹೊಂದಿದ್ದು, ಅರಣ್ಯ ಸಂರಕ್ಷಣೆ, ಅರಣ್ಯ ಸಂವರ್ಧನೆ, ವೃಕ್ಷ ಸಂರಕ್ಷಣೆ, ವನ್ಯಜೀವಿ ಸಂರಕ್ಷಣೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.

ಅನಿಲ್ ಕುಂಬ್ಳೆ ಅವರಿಗೆ ವನ್ಯಜೀವಿಗಳ ಬಗ್ಗೆ ಅಪಾರ ಕಾಳಜಿ ಇದೆ. ಅರಣ್ಯದ ಬಗ್ಗೆ ಪ್ರೀತಿ ಇದೆ. ಹಾಗಾಗಿ, ಅವರು ಸಂಭಾವನೆ ಪಡೆಯದೆ ರಾಯಭಾರಿ ಆಗಲು ಸಮ್ಮತಿಸಿದ್ದಾರೆ ಎಂದು ಮಾಹಿತಿ ನೀಡಿದರು.

ರಾಯಭಾರಿಯಾಗಿ ನೇಮಿಸಿದಕ್ಕಾಗಿ ಸರ್ಕಾರ ಅರಣ್ಯ ಸಚಿವರಿಗೆ ಕೃತಜ್ಞತೆ ಸಲ್ಲಿಸುವೆ. ರಾಜ್ಯದ ಸಸ್ಯ ಹಾಗೂ ಪ್ರಾಣಿ ವೈವಿಧ್ಯತೆಯ ಬಗ್ಗೆ ಜಾಗೃತಿ ಮೂಡಿಸುವೆ. ವನ್ಯಜೀವಿ ಸಂರಕ್ಷಣೆಗೆ ಶ್ರಮಿಸುವೆ
ಅನಿಲ್ ಕುಂಬ್ಳೆ ಕ್ರಿಕೆಟಿಗ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.