ಸೋಮವಾರ, 25 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂಜನಾದ್ರಿಗೆ ಕೊಟ್ಟಿದ್ದು ₹20 ಕೋಟಿ ಮಾತ್ರ: ಶಿವರಾಜ

Published 15 ಆಗಸ್ಟ್ 2023, 15:49 IST
Last Updated 15 ಆಗಸ್ಟ್ 2023, 15:49 IST
ಅಕ್ಷರ ಗಾತ್ರ

ಕೊಪ್ಪಳ: ‘ಅಂಜನಾದ್ರಿ ಅಭಿವೃದ್ಧಿಯ ಬಗ್ಗೆ ದೊಡ್ಡಮಟ್ಟದಲ್ಲಿ ಪ್ರಚಾರ ಪಡೆದ ಹಿಂದಿನ ಬಿಜೆಪಿ ಸರ್ಕಾರ ತನ್ನ ಅಧಿಕಾರದ ಅವಧಿಯಲ್ಲಿ ನೀಡಿದ್ದು ₹ 20 ಕೋಟಿ ಮಾತ್ರ. ಆದರೆ, ಸಾರ್ವಜನಿಕವಾಗಿ ₹ 120 ಕೋಟಿ ನೀಡಿದ್ದಾಗಿ ಬಿಂಬಿಸಿಕೊಳ್ಳುತ್ತಿದೆ’ ಎಂದು ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ಶಿವರಾಜ ತಂಗಡಗಿ ಹೇಳಿದರು.

ಇಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿ, ’ಚುನಾವಣಾ ಪೂರ್ವದಲ್ಲಿ ಹೇಳಿದಂತೆ ಅಂಜನಾದ್ರಿ ಕ್ಷೇತ್ರವನ್ನು ಅಭಿವೃದ್ಧಿ ಮಾಡುತ್ತೇವೆ. ಬಜೆಟ್‌ನಲ್ಲಿ ಕೊಪ್ಪಳ ಜಿಲ್ಲೆಗೆ ಜಾನಪದ ಲೋಕಕ್ಕೆ ಮಂಜೂರಾಗಿರುವ ₹ 2 ಕೋಟಿಗೆ ನನ್ನ ಇಲಾಖೆಯಿಂದಲೂ ₹ 1.5 ಕೋಟಿ ಹೆಚ್ಚುವರಿ ಅನುದಾನ ನೀಡಲಾಗುವುದು’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT