ಬೆಂಗಳೂರು: ಬೆಂಗಳೂರು: ಅನ್ನಭಾಗ್ಯ ಯೋಜನೆಯ ಪಡಿತರ ವಿತರಣಾ ವ್ಯವಸ್ಥೆ ಅಡಿ ಇದೇ ತಿಂಗಳಿನಿಂದ ಪ್ರತಿ ಫಲಾನುಭವಿಗೆ 10 ಕೆ.ಜಿ ಅಕ್ಕಿ ಸಿಗಲಿದೆ.

ಈ ಕುರಿತು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಆಹಾರ ಸಚಿವ ಕೆ.ಎಚ್. ಮುನಿಯಪ್ಪ, ‘ಗ್ಯಾರಂಟಿ ಯೋಜನೆಯ ಘೋಷಣೆಯಂತೆ ರಾಜ್ಯ ಸರ್ಕಾರ 2023ರ ಜುಲೈನಿಂದ ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡುವ ಪ್ರಕ್ರಿಯೆ ಆರಂಭಿಸಿತ್ತು. ಈ ತಿಂಗಳಿನಿಂದಲೇ ಅಕ್ಕಿ ಪೂರೈಸಲು ನಿರ್ಧರಿಸಲಾಗಿದೆ. ನಗದು ವರ್ಗಾವಣೆ ಸ್ಥಗಿತಗೊಳಿಸಲಾಗುತ್ತಿದೆ. ನವೆಂಬರ್ ಹಾಗೂ ಡಿಸೆಂಬರ್ ಬಾಕಿಯನ್ನು ಜಮೆ ಮಾಡಲಾಗುವುದು. ಜನವರಿಯಲ್ಲಿ ನೀಡಬೇಕಿದ್ದ ಹಣಕ್ಕೆ ಬದಲಾಗಿ ಫೆಬ್ರುವರಿ ಪಡಿತರದಲ್ಲಿ 5 ಕೆ.ಜಿ. ಹೆಚ್ಚುವರಿ ಅಕ್ಕಿ ನೀಡುತ್ತಿದ್ದು, ಇದೊಂದು ತಿಂಗಳು ಪಡಿತರದಾರರಿಗೆ 15 ಕೆ.ಜಿ. ಅಕ್ಕಿ ದೊರೆಯಲಿದೆ. ನಂತರ ನಿರಂತರವಾಗಿ 10 ಕೆ.ಜಿ. ವಿತರಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

2023–24ನೇ ಸಾಲಿನಲ್ಲಿ ಕೇಂದ್ರ ಸರ್ಕಾರ ಮುಕ್ತ ಮಾರುಕಟ್ಟೆ ಮಾರಾಟ ಯೋಜನೆ ಅಡಿ ಪ್ರತಿ ತಿಂಗಳು ಅಗತ್ಯವಿದ್ದ 2.29 ಲಕ್ಷ ಅಕ್ಕಿ ಪೂರೈಸಲು ನಿರಾಕರಿಸಿತ್ತು. ಹಾಗಾಗಿ, ಅಕ್ಕಿ ಬದಲು ನಗದು ನೀಡಲು ಸಂಪುಟ ಸಭೆ ನಿರ್ಧಾರ ತೆಗೆದುಕೊಂಡಿತ್ತು. ಈಗ ಕೆ.ಜಿ.ಗೆ ₹22.90ರಂತೆ ಜೂನ್ವರೆಗೆ ಪೂರೈಕೆ ಮಾಡಲು ಕೇಂದ್ರ ಒಪ್ಪಿಗೆ ನೀಡಿದೆ ಎಂದರು.

ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ‘ಗ್ಯಾರಂಟಿ’ ಭರವಸೆಯಂತೆ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಪ್ರತಿಯೊಬ್ಬರಿಗೂ 10 ಕೆ.ಜಿ. ಅಕ್ಕಿ ನೀಡಬೇಕಿತ್ತು. ಅಗತ್ಯ ಪ್ರಮಾಣದ ಅಕ್ಕಿ ದೊರಕದ ಕಾರಣ ಕೇಂದ್ರ ನೀಡುತ್ತಿರುವ 5 ಕೆ.ಜಿ. ಅಕ್ಕಿಯನ್ನು ಮಾತ್ರ ಪೂರೈಸಿ, ಉಳಿದ 5 ಕೆ.ಜಿ. ಅಕ್ಕಿಯ ಬದಲು ಫಲಾನುಭವಿಗಳ ಖಾತೆಗೆ ಡಿಬಿಟಿ ಮೂಲಕ ₹170 ಜಮೆ ಮಾಡಲಾಗುತ್ತಿತ್ತು.

ಬಿಪಿಎಲ್ ಕಾರ್ಡ್ ಪಡೆಯಲು ನಿಗದಿ ಮಾಡಿರುವ ಆರ್ಥಿಕ ಮಾನದಂಡವನ್ನು ಪರಿಷ್ಕರಿಸಲು ಹಲವರು ಕೋರಿದ್ದಾರೆ. ಈ ಕುರಿತು ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು
ಕೆ.ಎಚ್. ಮುನಿಯಪ್ಪ ಆಹಾರ ಸಚಿವ

ತಿಂಗಳಿಗೆ ₹190 ಕೋಟಿ ಉಳಿತಾಯ

ಕೇಂದ್ರ ಸರ್ಕಾರ ಕೆ.ಜಿ.ಗೆ ₹22.50ರಂತೆ ಅಕ್ಕಿ ಸರಬರಾಜು ಮಾಡಲು ಒಪ್ಪಿಗೆ ನೀಡಿದ್ದು ಇದರಿಂದ ರಾಜ್ಯ ಸರ್ಕಾರಕ್ಕೆ ಪ್ರತಿ ತಿಂಗಳು ಸುಮಾರು ₹190 ಕೋಟಿ ಉಳಿತಾಯವಾಗಲಿದೆ. ಒಂದೂವರೆ ವರ್ಷದ ಹಿಂದೆ ಅನ್ನಭಾಗ್ಯ ಯೋಜನೆ ಆರಂಭಿಸಿದಾಗ ₹34.60 ನೀಡಲು ಸಿದ್ಧವಿದ್ದರೂ ಅಗತ್ಯ ಅಕ್ಕಿ ದೊರೆತಿರಲಿಲ್ಲ. ಹಾಗಾಗಿ ಅಷ್ಟೇ ಹಣವನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡಲು ನಿರ್ಧಾರ ತೆಗೆದುಕೊಂಡಿತ್ತು. ಈಗ ₹22.50 ದರದಂತೆ ಅಕ್ಕಿ ಸಿಗುತ್ತಿದ್ದು ರಾಜ್ಯ ಸರ್ಕಾರಕ್ಕೆ ದೊಡ್ಡ ಮೊತ್ತದ ಹಣ ಉಳಿತಾಯವಾಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.