ಬೆಂಗಳೂರು: ‘ಅನ್ನಭಾಗ್ಯ, ಗೃಹಲಕ್ಷ್ಮಿ ಸೇರಿದಂತೆ ಯಾವುದೇ ಯೋಜನೆಯನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಅನ್ನ ಭಾಗ್ಯದ ಹಣ ಮೂರು ತಿಂಗಳುಗಳಿಂದ ಬಾಕಿ ಇರುವುದು ನನಗೆ ಗೊತ್ತಿಲ್ಲ. ತಕ್ಷಣ ಬಿಡುಗಡೆ ಮಾಡಲಾಗುವುದು’ ಎಂದರು.

‘ಫಲಾನುಭವಿಗಳ ಖಾತೆಗೆ ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆಯ ಹಣವನ್ನು ಇಲ್ಲಿಯವರೆಗೆ ಬಿಡುಗಡೆ ಮಾಡಿದ್ದೇವೆ ಅಂದಮೇಲೆ ಮುಂದೆಯೂ ಮಾಡುತ್ತೇವೆ’ ಎಂದರು.

ಕೊಟ್ಟ ಮಾತಿನಂತೆ ನಡೆಯುತ್ತೇವೆ: ‘ಅನ್ನಭಾಗ್ಯ ಯೋಜನೆಯಡಿ ಅಕ್ಕಿಯ ಹಣ ಮತ್ತು ಗೃಹಲಕ್ಷ್ಮಿ ಯೋಜನೆಯ ಹಣ ಮೂರು ತಿಂಗಳುಗಳಿಂದ ಫಲಾನುಭವಿಗಳ ಖಾತೆಗೆ ಹೋಗಿಲ್ಲ. ಈ ಹಣವನ್ನು ನಾವು ಹಾಕುತ್ತೇವೆ. ಕೊಟ್ಟ ಮಾತಿನಂತೆ ನಾವು ನಡೆಯುತ್ತೇವೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.