ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೈಂಗಿಕ ದೌರ್ಜನ್ಯ: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ದೂರು

Published 2 ಮೇ 2024, 8:33 IST
Last Updated 2 ಮೇ 2024, 8:33 IST
ಅಕ್ಷರ ಗಾತ್ರ

ಬೆಂಗಳೂರು: ಪೆನ್‌ಡ್ರೈವ್ ವಿಡಿಯೊ ಪ್ರಕರಣಕ್ಕೆ ಹೊಸ ತಿರುವು ಪಡೆದಿದ್ದು, ‘ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ್ದ’ ಆರೋಪದಡಿ ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ, ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಹೊಸದಾಗಿ ಅತ್ಯಾಚಾರ (ಐಪಿಸಿ 376) ಪ್ರಕರಣ ದಾಖಲಾಗಿದೆ.

ಮನೆ ಕೆಲಸದ ಮಹಿಳೆ ಹಾಗೂ ಅವರ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಡಿ ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ ಹಾಗೂ ಪ್ರಜ್ವಲ್ ವಿರುದ್ಧ ಹೊಳೆನರಸೀಪುರ ಟೌನ್‌ ಠಾಣೆಯಲ್ಲಿ ಏಪ್ರಿಲ್ 28ರಂದು ಎಫ್‌ಐಆರ್ ದಾಖಲಾಗಿತ್ತು. ಹಾಸನದ ಸಂತ್ರಸ್ತೆಯೊಬ್ಬರು ಪ್ರತ್ಯೇಕ ದೂರು ನೀಡಿದ್ದಾರೆ. ತಮ್ಮ ಮೇಲೆ ಪ್ರಜ್ವಲ್ ರೇವಣ್ಣ ಅತ್ಯಾಚಾರ ಎಸಗಿರುವುದಾಗಿ ಆರೋಪಿಸಿದ್ದು, ಎಸ್‌ಐಟಿ ಅಧಿಕಾರಿಗಳು ಚಾಲ್ತಿಯಲ್ಲಿರುವ ಪ್ರಕರಣದಲ್ಲಿ ಐಪಿಸಿ ಸೆಕ್ಷನ್ 376 ಸೇರ್ಪಡೆ ಮಾಡಿಕೊಂಡು ತನಿಖೆ ಮುಂದುವರಿಸಿದ್ದಾರೆ.

‘ಮೊದಲ ಪ್ರಕರಣದಲ್ಲಿ ರೇವಣ್ಣ ಹಾಗೂ ಪ್ರಜ್ವಲ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪವಿತ್ತು. ಇದೀಗ, ಪ್ರಜ್ವಲ್ ವಿರುದ್ಧ ಮಾತ್ರ ಅತ್ಯಾಚಾರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಎಸ್‌ಐಟಿ ಮೂಲಗಳು ಹೇಳಿವೆ.

ಈ ಬೆಳವಣಿಗೆಗಳ ಮಧ್ಯೆಯೇ, ಬಂಧನದ ಭೀತಿಯಲ್ಲಿರುವ ಶಾಸಕ ರೇವಣ್ಣ, ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಜರ್ಮನಿಯಲ್ಲಿ ಇದ್ದಾರೆ ಎನ್ನಲಾಗಿದ್ದ ಪ್ರಜ್ವಲ್‌, ದುಬೈಗೆ ಸ್ಥಳಾಂತರ ಗೊಂಡಿದ್ದು, ಅವರ ಪತ್ತೆಗೆ ಎಸ್ಐಟಿ ಬಲೆ ಬೀಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT