ಬೆಂಗಳೂರು: ರಾಜ್ಯದಲ್ಲಿ ಮತ್ತೊಬ್ಬ ವ್ಯಕ್ತಿಗೆ ಕೋವಿಡ್ 19 ಸೋಂಕಿರುವುದು ದೃಢವಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 27ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ.

ಕೋವಿಡ್ 19 ರಾಜ್ಯದಲ್ಲಿ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಅಶ್ವತ್ಥ ನಾರಾಯಣ ಮತ್ತು ಆರೋಗ್ಯ ಸಚಿವ ಶ್ರೀರಾಮುಲು ಅವರು ಅಧಿಕಾರಿಗಳ ಸಭೆ ನಡೆಸಿದರು. ನಂತರ ಮಾತನಾಡಿದ ಶ್ರೀರಾಮುಲು ಈ ವಿಷಯ ತಿಳಿಸಿದರು.

ಅಲ್ಲದೆ,ಕೂಡಲೇ 1,000 ವೆಂಟಿಲೇಟರ್ ಖರೀದಿಗೆ ತೀರ್ಮಾನ ಕೈಗೊಂಡಿರುವುದಾಗಿ ಹೇಳಿದರು.

‘ಸರ್ಕಾರ ಈಗಾಗಲೇ 10 ಲಕ್ಷ ಮಾಸ್ಕ್ ಖರೀದಿಸಲು ಕ್ರಮ ಕೈಗೊಂಡಿದೆ. 5 ಲಕ್ಷ ವೈಯಕ್ತಿಕ ರಕ್ಷಣಾ ಸಾಧನಗಳ (PPE) ಖರೀದಿಗೆ ನಿರ್ಧರಿಸಲಾಗಿದೆ. ಆರೋಗ್ಯ ಇಲಾಖೆಯು ಯುದ್ಧೋಪಾದಿಯಲ್ಲಿ ಸೋಂಕು ತಡೆಹಿಡಿಯಲು ಕಾರ್ಯೋನ್ಮುಖವಾಗಿದೆ. ನಾಗರಿಕರು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು,’ ಎಂದೂ ಅವರು ವಿನಂತಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.