ಗುರುವಾರ, 28 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿ.ಕೆ ಹರಿಪ್ರಸಾ‌ದ್‌ ಪಕ್ಷ ವಿರೋಧಿ ಚಟುವಟಿಕೆ: ಮಾಲೂರು ಕಾಂಗ್ರೆಸ್ ಶಾಸಕ ನಂಜೇಗೌಡ

ಶಿಸ್ತು ಕ್ರಮಕ್ಕೆ ಆಗ್ರಹ
Published 10 ಸೆಪ್ಟೆಂಬರ್ 2023, 9:35 IST
Last Updated 10 ಸೆಪ್ಟೆಂಬರ್ 2023, 9:35 IST
ಅಕ್ಷರ ಗಾತ್ರ

ಮಾಲೂರು (ಕೋಲಾರ): ‘ವಿಧಾನ ಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್‌ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ’ ಎಂದು ಮಾಲೂರು ಕ್ಷೇತ್ರದ ಕಾಂಗ್ರೆಸ್‌ ಶಾಸಕ ಕೆ.ವೈ.ನಂಜೇಗೌಡ ಆರೋಪಿಸಿದರು.

ಭಾನುವಾರ ತಾಲ್ಲೂಕಿನ ಮಾಸ್ತಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ‘ಹರಿಪ್ರಸಾದ್‌ ಶನಿವಾರ ನೀಡಿದ ಹೇಳಿಕೆಗಳು ನಮಗೆ ಬೇಸರ ಉಂಟು ಮಾಡಿವೆ. ಕಾಂಗ್ರೆಸ್‌ ಪಕ್ಷದಲ್ಲಿ ಎಲ್ಲಾ ರೀತಿ ಅವಕಾಶ ಪಡೆದವರು ಹರಿಪ್ರಸಾದ್, ಎಐಸಿಸಿವರೆಗೆ ಅವರಿಗೆ ಸ್ಥಾನಮಾನಗಳು ಸಿಕ್ಕಿವೆ. ಆದರೆ, ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ವಿರುದ್ಧವೇ ಈಗ ಮಾತನಾಡುತ್ತಿದ್ದಾರೆ’ ಎಂದು ಹರಿಹಾಯ್ದರು.

‘ಕಾಂಗ್ರೆಸ್‌ನಲ್ಲಿ ಸಾಮಾಜಿಕ ನ್ಯಾಯ ಇಲ್ಲ ಎಂಬುದಾಗಿ ಹೇಳಿದ್ದಾರೆ. ಮಂತ್ರಿ ಮಾಡಿಲ್ಲವೆಂದು ಕೊಟ್ಟ ಅವಕಾಶ ಮರೆತು ಪಕ್ಷದ ವಿರುದ್ಧವಾಗಿ ಮಾತನಾಡುವುದು ಖಂಡನೀಯ’ ಎಂದರು.

‘ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರ ಹೋರಾಟಗಳಿಂದಾಗಿ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಬಲಿಷ್ಠವಾಗಿದೆ. ಅವರಷ್ಟು ದೊಡ್ಡ ನಾಯಕ ಹರಿಪ್ರಸಾದ್‌ ಅಲ್ಲ. ಇದನ್ನು ಅವರು ಅರ್ಥ ಮಾಡಿಕೊಳ್ಳಬೇಕು. ಅವರ ಮೇಲೆ ಕೆಪಿಸಿಸಿ ಹಾಗೂ ಎಐಸಿಸಿ ಶಿಸ್ತಿನ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

‘ಲೋಕಸಭೆ ಚುನಾವಣೆ ಹತ್ತಿರ ಇರಬೇಕಾದ ಈ ಸಮಯದಲ್ಲಿ ಪಕ್ಷದ ಒಬ್ಬ ಹಿರಿಯ ನಾಯಕ ಈ ರೀತಿ ಮಾತನಾಡುವುದು ಸರಿ ಅಲ್ಲ. ಹೀಗಾಗಿ, ತಕ್ಷಣ ಕ್ರಮ ವಹಿಸಬೇಕು’ ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT