ಹಾನಗಲ್ (ಹಾವೇರಿ ಜಿಲ್ಲೆ): ‘ರಾಜ್ಯದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುತ್ತಿರುವ ಹಾಗೂ ಶಾಂತಿ ಕದಡುತ್ತಿರುವ ಸಮಾಜಘಾತುಕ ಶಕ್ತಿಗಳನ್ನು ಪತ್ತೆ ಮಾಡಿ ಮಟ್ಟಹಾಕಲು ವಿಶೇಷ ಪಡೆಯ ಅಗತ್ಯವಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ತಾಲ್ಲೂಕಿನ ಅಕ್ಕಿಆಲೂರಿನಲ್ಲಿ ವಿವಿಧ ಕಾಮಗಾರಿಗಳ ಲೋಕಾರ್ಪಣೆ ಸಮಾರಂಭಕ್ಕೆ ಭಾನುವಾರ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುದ್ದಿಗಾರರ ಜೊತೆ ಮಾತನಾಡಿದರು.

‘ಕರಾವಳಿಯಲ್ಲಿ ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ರಚಿಸುವ ಬಗ್ಗೆ ಗೃಹ ಸಚಿವರೊಂದಿಗೆ ಮಾತನಾಡಿ ಕ್ರಮ ಕೈಗೊಳ್ಳಲಾಗುವುದು’ ಎಂದರು.

ಮಂಗಳೂರಿನಲ್ಲಿ ಫಾಜಿಲ್ ಹತ್ಯೆಯಾದಾಗ ಸರ್ಕಾರ ₹25 ಲಕ್ಷ ಪರಿಹಾರ ನೀಡಿತ್ತು.ಅದೇ ಹಣದಲ್ಲಿ ಫಾಜಿಲ್ ಸಹೋದರ, ಸುಹಾಸ್ ಶೆಟ್ಟಿ ಹತ್ಯೆಗೆ ಸುಪಾರಿ ನೀಡಿದ್ದಾರೆ ಎಂಬುದಾಗಿ ಪೊಲೀಸರು ಹೇಳಿರುವುದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ‘ಈ ಬಗ್ಗೆ ನನಗೆ ತಿಳಿದಿಲ್ಲ. ಸಚಿವ ದಿನೇಶ್ ಗುಂಡೂರಾವ್ ಹಾಗೂ ಗೃಹ ಸಚಿವ ಜಿ.ಪರಮೇಶ್ವರ್ ಇಬ್ಬರೂ ಮಂಗಳೂರಿಗೆ ಭೇಟಿ ನೀಡಿದ್ದಾರೆ. ಅವರೊಂದಿಗೆ ಮಾತನಾಡಿದ ನಂತರ ಪ್ರತಿಕ್ರಿಯೆ ನೀಡುವೆ’ ಎಂದರು.

‘ಜಾತಿಗಣತಿ ಮಾಡಿಸುವ ಮೂಲಕ ಸಿದ್ದರಾಮಯ್ಯ ಜಾತಿ–ಜಾತಿಗಳ ನಡುವೆ ಸಂಘರ್ಷ ಉಂಟು ಮಾಡುತ್ತಿದ್ದಾರೆ’ ಎಂದು ಕೆಲವರು ಆರೋಪಿಸುತ್ತಿರುವುದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ‘ಆರೋಪ ಮಾಡುತ್ತಿರುವವರು, ಕೇಂದ್ರ ಸರ್ಕಾರ ಜಾತಿಗಣತಿ ಮಾಡಿಸುವುದನ್ನು ಮುಕ್ತ ಮನಸ್ಸಿನಿಂದ ಸ್ವಾಗತ ಮಾಡುತ್ತಿದ್ದಾರೆ. ಶಂಖದಿಂದ ಬಂದರೆ ಮಾತ್ರ ತೀರ್ಥ ಎಂಬಂತಾಗಿದೆ. ಮೊದಲು ರಾಜಕೀಯವಾಗಿ ಹೇಳುತ್ತಿದ್ದರು. ವಾಸ್ತವಿಕತೆಯ ಆಧಾರದ ಮೇಲೆ ಹೇಳುತ್ತಿರಲಿಲ್ಲ’ ಎಂದರು.

‘ಪಾಕಿಸ್ತಾನದ ವಿಚಾರದಲ್ಲಿ ಕಾಂಗ್ರೆಸ್ ಇಬ್ಬಗೆಯ ನೀತಿಯನ್ನು ಅನುಸರಿಸುತ್ತಿದೆ’ ಎಂಬ ಮಾಜಿ ಪ್ರಧಾನಿ ದೇವೇಗೌಡರ ಹೇಳಿಕೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ‘ದೇವೇಗೌಡರು ಬಿಜೆಪಿ ಸೇರುವ ಮುನ್ನ ನರೇಂದ್ರ ಮೋದಿಯವರ ಬಗ್ಗೆ ಏನು ಮಾತನಾಡುತ್ತಿದ್ದರು. ಈಗ ಏನು ಮಾತನಾಡುತ್ತಿದ್ದಾರೆ ? ಇಬ್ಬಗೆಯ ನೀತಿ ದೇವೇಗೌಡರಿಗೆ ಇದೆ’ ಎಂದರು.
.ಸುಹಾಸ್ ಶೆಟ್ಟಿ ಮೇಲೆ 5 ಕೇಸ್ ಇವೆ. ಹೀಗಾಗಿ ಮನೆಗೆ ಭೇಟಿ ಕೊಟ್ಟಿಲ್ಲ: ಪರಮೇಶ್ವರ.ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ರಚನೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.