ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭೆ ಚುನಾವಣೆ ಬಳಿಕ ಏನು ಬೇಕಾದರೂ ಆಗಬಹುದು: ಎಚ್.ಡಿ. ಕುಮಾರಸ್ವಾಮಿ

Published 25 ಮೇ 2023, 9:55 IST
Last Updated 25 ಮೇ 2023, 9:55 IST
ಅಕ್ಷರ ಗಾತ್ರ

ಬೆಂಗಳೂರು: ಲೋಕಸಭಾ ಚುನಾವಣೆ ಬಳಿಕ ಈ ಸರ್ಕಾರದ ಭವಿಷ್ಯ ಏನು ಬೇಕಾದರೂ ಆಗಬಹುದು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ನಗರದ ಅರಮನೆ ಮೈದಾನದಲ್ಲಿ ಗುರುವಾರ ನಡೆದ ಜೆಡಿಎಸ್ ಆತ್ಮಾವಲೋಕನ ಸಭೆ ಬಳಿಕ ಪತ್ರಕರ್ತರ ಜತೆ ಮಾತನಾಡಿದ ಅವರು, 'ಈ ಸರ್ಕಾರದಲ್ಲಿ ವಿಶ್ವಾಸದ ಕೊರತೆ ಇದೆ. ಹೀಗಾಗಿ ಲೋಕಸಭಾ ಚುನಾವಣೆ ಬಳಿಕ ಸರ್ಕಾರದಲ್ಲಿ ಏನು ಬೇಕಾದರೂ ಆಗಬಹುದು' ಎಂದರು.

ಅಧಿಕಾರಕ್ಕೆ ಬಂದ ತಕ್ಷಣ ಗ್ಯಾರಂಟಿಗಳನ್ನು ಜಾರಿಗೆ ತರುವುದಾಗಿ ಕಾಂಗ್ರೆಸ್ ನಾಯಕರು ಭರವಸೆ ನೀಡಿದ್ದರು. ಎಲ್ಲರಿಗೂ ಉಚಿತ ಎಂದು ಮುಖ್ಯಮಂತ್ರಿಯವರು ಚುನಾವಣೆಯಲ್ಲಿ ಭಾಷಣ ಮಾಡುತ್ತಿದ್ದರು. ಈಗ ಸುಳ್ಳು ಹೇಳಿ ಜನರಿಗೆ ಟೋಪಿ ಹಾಕಲು ಹೊರಟಿದ್ದಾರೆ. ಈಗ ಹೇಗೆ ಕೊಡುತ್ತಾರೆ ನೋಡೋಣ ಎಂದು ಸವಾಲು ಹಾಕಿದರು.

ಜನರಿಗೆ ಕೊಟ್ಟ ಭರವಸೆಗಳನ್ನು ತಕ್ಷಣ ಈಡೇರಿಸಬೇಕು. ಜನರಿಗೆ ಟೋಪಿ ಹಾಕಲು ಬಿಡುವುದಿಲ್ಲ ಎಂದರು.

'ಸಂಕಷ್ಟದ ಸಂದರ್ಭದಲ್ಲಿ ಒಂದು ಸಮುದಾಯದ ಪರ ಅಚಲವಾಗಿ ನಿಂತಿದ್ದೆ. ಆದರೆ, ಆ ಸಮುದಾಯದ ಜನರು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿದರು. ಇದರಿಂದ ಜೆಡಿಎಸ್ ಪಕ್ಷಕ್ಕೆ ಹಿನ್ನಡೆಯಾಯಿತು.‌ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೂ ಒಂದು ಸಮುದಾಯವನ್ನು ನಮ್ಮ ವಿರುದ್ಧ ಎತ್ತಿ ಕಟ್ಟಿದರು' ಎಂದು ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT