ನವದೆಹಲಿ: ಬೇಲೆಕೇರಿ ಬಂದರಿನಲ್ಲಿ ಕಬ್ಬಿಣದ ಅದಿರು ಕಳ್ಳತನ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಸಾಕ್ಷ್ಯ ನುಡಿದ ಕಾರಣಕ್ಕೆ ಎಚ್ಎಂಟಿ ಭೂವಿವಾದ ಪ್ರಕರಣದಲ್ಲಿ ತಮ್ಮನ್ನು ಬಲಿಪಶು ಮಾಡಿ ಮಾನಹಾನಿ ಮಾಡಲಾಗುತ್ತಿದೆ ಎಂದು ಆರೋಪಿಸಿ ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಎಪಿಸಿಸಿಎಫ್) ಆರ್.ಗೋಕುಲ್ ಅವರು ಸಿಬಿಐಗೆ ಪತ್ರ ಬರೆದಿದ್ದಾರೆ.

ಕಬ್ಬಿಣದ ಅದಿರು ಕದ್ದು, ರಫ್ತು ಮಾಡಿದ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಏಳು ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ 2024ರ ಅಕ್ಟೋಬರ್ 24ರಂದು ತೀರ್ಪು ನೀಡಿತ್ತು. ಉತ್ತರ ಕನ್ನಡ ಜಿಲ್ಲೆಯ ಬೇಲೆಕೇರಿ ಬಂದರಿನಲ್ಲಿ ಸಂಗ್ರಹಿಸಿಡಲಾಗಿದ್ದ ಸಾವಿರಾರು ಮೆಟ್ರಿಕ್ ಟನ್ ಕಬ್ಬಿಣದ ಅದಿರನ್ನು ಕಳ್ಳತನ ಮಾಡಿ, ಒಳಸಂಚು ರೂಪಿಸಿ, ವಿದೇಶಗಳಿಗೆ ಅಕ್ರಮವಾಗಿ ಸಾಗಣೆ ಮಾಡುವ ಮೂಲಕ ರಾಜ್ಯದ ಖಜಾನೆಗೆ ₹200 ಕೋಟಿಗೂ ಹೆಚ್ಚಿನ ಮೊತ್ತದ ನಷ್ಟ ಉಂಟು ಮಾಡಿದ ಆರು ಕ್ರಿಮಿನಲ್ ಪ್ರಕರಣಗಳಲ್ಲಿ ಈ ತೀರ್ಪು ಪ್ರಕಟಿಸಲಾಗಿತ್ತು.

ಬಳ್ಳಾರಿ ಅಕ್ರಮ ಗಣಿಗಾರಿಕೆ ಹಾಗೂ ಬೇಲೆಕೇರಿ ಬಂದರಿನಲ್ಲಿ ಕಬ್ಬಿಣದ ಅದಿರು ಕಳವು ಪ್ರಕರಣದ ತನಿಖೆಗೆ ಆಗ್ರಹಿಸಿ ಆಗಿನ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷವು ಬೆಂಗಳೂರಿನಿಂದ ಬಳ್ಳಾರಿಯವರೆಗೆ ಪಾದಯಾತ್ರೆ ನಡೆಸಿತ್ತು. ಆದರೆ, ಈಗ ಎಚ್ಎಂಟಿ ಭೂವಿವಾದ ಪ್ರಕರಣದಲ್ಲಿ ಗೋಕುಲ್ ಅವರನ್ನು ಸೇವೆಯಿಂದ ಅಮಾನತು ಮಾಡಬೇಕೆಂಬ ಅರಣ್ಯ ಇಲಾಖೆಯ ಪ್ರಸ್ತಾವನೆಯ ಕಡತವು ಸಿದ್ದರಾಮಯ್ಯ ಅವರ ಮುಂದಿದೆ.

ಪತ್ರದಲ್ಲೇನಿದೆ:

‘ಬೇಲೆಕೇರಿ ಕಬ್ಬಿಣದ ಅದಿರು ಕಳ್ಳಸಾಗಣೆಗೆ ಸಂಬಂಧಿಸಿದಂತೆ ಬೆಂಗಳೂರಿನ ಸಿಬಿಐ ನ್ಯಾಯಾಲಯದಲ್ಲಿ ದಾಖಲಾಗಿರುವ ಆರು ಪ್ರಕರಣಗಳಲ್ಲಿ ನಾನು ಸಾಕ್ಷಿಯಾಗಿದ್ದೇನೆ. ಕೆಲವು ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗುವಂತೆ ಸಮನ್ಸ್ ಬಂದಿದೆ. ಹಲವು ಪ್ರಕರಣಗಳಲ್ಲಿ ವಿಚಾರಣೆ ಪೂರ್ಣಗೊಂಡಿದೆ. ಸೈಲ್ ಅವರನ್ನು ದೋಷಿ ಎಂದು ನ್ಯಾಯಾಲಯವು ಅಕ್ಟೋಬರ್ 24ರಂದು ತೀರ್ಪು ನೀಡಿತ್ತು. ಬೆಂಗಳೂರಿನ ಎಚ್ಎಂಟಿ ಜಾಗವನ್ನು ಡಿನೋಟಿಫಿಕೇಷನ್ ಮಾಡಬೇಕೆಂದು ಸುಪ್ರೀಂ ಕೋರ್ಟ್ಗೆ 2020ರಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಲಾಗಿದ್ದು, ಇದರಲ್ಲಿ ನಾನು ಭಾಗಿಯಾಗಿದ್ದೇನೆ ಎಂದು ಆರೋಪಿಸಿ ಅರಣ್ಯ ಇಲಾಖೆಯು ನವೆಂಬರ್ 11ರಂದು ನೋಟಿಸ್ ನೀಡಿತ್ತು. ಅದು ನನಗೆ ಸಿಕ್ಕಿದ್ದು ನವೆಂಬರ್ 13ರಂದು. ನನಗೆ ನೋಟಿಸ್ ಪ್ರತಿ ಸಿಗುವ ಮೊದಲೇ ನವೆಂಬರ್ 12ರಂದು ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿದೆ. ಇದರಿಂದ ನನಗೆ ಆಘಾತವಾಗಿದೆ’ ಎಂದು ಅವರು ಪತ್ರದಲ್ಲಿ ಹೇಳಿಕೊಂಡಿದ್ದಾರೆ.

‘ಇದರಿಂದಾಗಿ, ಇಷ್ಟು ವರ್ಷಗಳಿಂದ ಕಾಯ್ದುಕೊಂಡಿದ್ದ ಘನತೆ ಹಾಗೂ ಗೌರವಕ್ಕೆ ಭಾರಿ ಹಾನಿಯಾಗಿದೆ. ಈ ಹಗರಣದಲ್ಲಿ ನನ್ನನ್ನು ಸಿಲುಕಿಸುವ ಪ್ರಯತ್ನ ಮಾಡಲಾಗಿದೆ. ಈ ಬಗ್ಗೆ ಅರಣ್ಯ ಇಲಾಖೆಯ ಮುಖ್ಯಸ್ಥರಿಗೆ ನವೆಂಬರ್ 12ರಂದೇ ಪತ್ರ ಬರೆದು ಆಕ್ಷೇಪ ವ್ಯಕ್ತಪಡಿಸಿದ್ದೇನೆ’ ಎಂದಿದ್ದಾರೆ.

‘2010ರಲ್ಲಿ ಕಾರವಾರ ವೃತ್ತದಲ್ಲಿ ನಾನು ಡಿಸಿಎಫ್ ಆಗಿದ್ದೆ. ಬಳ್ಳಾರಿಯಿಂದ ಅಕ್ರಮವಾಗಿ ಸಾಗಿಸಿದ ಅದಿರನ್ನು ಬೇಲೆಕೇರಿ ಬಂದರಿನಲ್ಲಿ ಇಡಲಾಗಿತ್ತು. ನಾನು ದಾಳಿ ನಡೆಸಿ ಅವುಗಳನ್ನು ವಶಕ್ಕೆ ಪಡೆದಿದ್ದೆ. ಈ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ಶಿಫಾರಸು ಮಾಡಿದ್ದೆ. ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಈ ಪ್ರಕರಣವನ್ನು ಸಿಬಿಐಗೆ ಒಪ್ಪಿಸಲಾಗಿತ್ತು. ಈ ಕಾರಣಕ್ಕೆ ನನ್ನನ್ನು ಬಲಿಪಶು ಮಾಡಲಾಗುತ್ತಿದೆ. ನೋಟಿಸ್ ನೀಡಿರುವ ಕಾರಣಗಳ ಬಗ್ಗೆ ತನಿಖೆ ನಡೆಸಬೇಕು. ನನಗೆ ಸೂಕ್ತ ರಕ್ಷಣೆ ನೀಡಬೇಕು’ ಎಂದು 34 ಪುಟಗಳ ಪತ್ರದಲ್ಲಿ ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.