ಬೆಂಗಳೂರು: ಅಪೆಕ್ಸ್ ಬ್ಯಾಂಕ್ ಅನ್ನು ಮಾಹಿತಿ ಹಕ್ಕು ಕಾಯ್ದೆಯಡಿ (ಆರ್ಟಿಐ) ಸಾರ್ವಜನಿಕ ಪ್ರಾಧಿಕಾರ ಎಂದು ಘೋಷಿಸಿರುವ ರಾಜ್ಯ ಮಾಹಿತಿ ಆಯೋಗವು, ಎಲ್ಲಾ ಕಚೇರಿಗಳಲ್ಲಿ ತಕ್ಷಣವೇ ಸಾರ್ವಜನಿಕ ಮಾಹಿತಿ ಅಧಿಕಾರಿಗಳು ಮತ್ತು ಪ್ರಥಮ ಮೇಲ್ಮನವಿ ಪ್ರಾಧಿಕಾರಿಗಳನ್ನು ನೇಮಿಸಬೇಕು ಎಂದೂ ಆದೇಶಿಸಿದೆ.

ರಾಜ್ಯ ಮಾಹಿತಿ ಆಯುಕ್ತ ಎಸ್. ರಾಜಶೇಖರ ಈ ಆದೇಶ ಹೊರಡಿಸಿದ್ದಾರೆ.

ಹನುಮಂತ ವಸಂತ ಶಿಂಧೆ ಸಲ್ಲಿಸಿದ್ದ ದ್ವಿತೀಯ ಮೇಲ್ಮನವಿಯಲ್ಲಿ ನಿರಾಣಿ ಶುಗರ್ಸ್ ಲಿಮಿಟೆಡ್ ಸಂಸ್ಥೆಯು ಮಾರ್ಚ್ 2022ರಿಂದ ಜೂನ್ 2024ರವರೆಗೆ ಅಪೆಕ್ಸ್ ಬ್ಯಾಂಕಿನಿಂದ ಪಡೆದ ಸಾಲಗಳಿಗೆ ಸಂಬಂಧಿಸಿದಂತೆ ಸಲ್ಲಿಸಿದ ದಾಖಲೆಗಳ ಪ್ರತಿಗಳನ್ನು ನೀಡುವಂತೆ ಅರ್ಜಿ ಸಲ್ಲಿಸಿದ್ದರು. ಆದರೆ ಬ್ಯಾಂಕ್ ತಾವು ಸಹಕಾರ ಸಂಘವಾಗಿರುವುದರಿಂದ ಮಾಹಿತಿ ಹಕ್ಕು ಕಾಯ್ದೆಯ ವ್ಯಾಪ್ತಿಗೆ ಬರುವುದಿಲ್ಲ ಎಂದು ಹೇಳಿ ಮಾಹಿತಿ ನೀಡಲು ನಿರಾಕರಿಸಿತ್ತು.

ಈ ಬಗ್ಗೆ ವಿಚಾರಣೆ ನಡೆಸಿದ ಮಾಹಿತಿ ಆಯುಕ್ತರು, ‘ಬ್ಯಾಂಕ್ ಕಾರ್ಯಾಚರಣೆಯ ಮೇಲೆ ಸರ್ಕಾರದ ಆಳವಾದ ಮತ್ತು ವ್ಯಾಪಕ ನಿಯಂತ್ರಣ ಇದೆ’ ಎಂದು ತಮ್ಮ ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.

ಮಾಹಿತಿ ಹಕ್ಕು ಕಾಯ್ದೆಯ ಸೆಕ್ಷನ್ 4(1)(ಎ) ಮತ್ತು 4(1)(ಬಿ) ಅಡಿಯಲ್ಲಿ ಪ್ರಮುಖ ಮಾಹಿತಿಯನ್ನು ಅಪೆಕ್ಸ್ ಬ್ಯಾಂಕ್ ಸಾರ್ವಜನಿಕವಾಗಿ ಪ್ರಕಟಿಸಬೇಕು. ಇದನ್ನು ತಕ್ಷಣ ಜಾರಿಗೆ ತರಲು ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಸಹಕಾರ ಸಂಘಗಳ ನೋಂದಣಾಧಿಕಾರಿಗಳು ಕ್ರಮವಹಿಸಬೇಕು ಎಂದು ಸೂಚನೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.