ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಗರ್ ಹುಕುಂ ಅರ್ಜಿ ಶೀಘ್ರ ವಿಲೇವಾರಿಗೆ ಇನ್ನು ಆ್ಯಪ್ : ಕೃಷ್ಣ ಬೈರೇಗೌಡ

Published 4 ಅಕ್ಟೋಬರ್ 2023, 17:05 IST
Last Updated 4 ಅಕ್ಟೋಬರ್ 2023, 17:05 IST
ಅಕ್ಷರ ಗಾತ್ರ

ಬೆಂಗಳೂರು: ‘ಅಕ್ರಮ ಸಕ್ರಮ ಯೋಜನೆಯಡಿ ನಮೂನೆ 50, 53, 57 ಅಡಿ ಸಲ್ಲಿಕೆಯಾದ ಅರ್ಜಿಗಳ ನ್ಯಾಯಯುತ ವಿಲೇವಾರಿ ಮತ್ತು ಅನಧಿಕೃತ ಸಾಗುವಳಿ ಭೂಮಿಯನ್ನು ‘ಬಗರ್ ಹುಕುಂ ತಂತ್ರಾಂಶ’ (ಆ್ಯಪ್‌) ಮೂಲಕ ಸಕ್ರಮಗೊಳಿಸುವ ಪ್ರಕ್ರಿಯೆಯನ್ನು ಶೀಘ್ರ ಮುಗಿಸುವಂತೆ ಇಲಾಖೆಯ ಅಧಿಕಾರಿಗಳಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಸೂಚನೆ ನೀಡಿದರು.

ವಿಕಾಸಸೌಧದಲ್ಲಿ ಬುಧವಾರ ನಡೆದ ಸಭೆಯಲ್ಲಿ ಬಗರ್ ಹುಕುಂ ಆ್ಯಪ್‌ ಕುರಿತು ಅಧಿಕಾರಿಗಳು ಸಚಿವರಿಗೆ ಪ್ರಾತ್ಯಕ್ಷಿಕೆ ತೋರಿಸಿದರು. ಈ ವೇಳೆ ಸಚಿವರು, ಯಾವುದೇ ಲೋಪದೋಷ ಇಲ್ಲದಂತೆ ಆ್ಯಪ್‌ ಅಭಿವೃದ್ಧಿಪಡಿಸುವಂತೆ ‌ನಿರ್ದೇಶನ ನೀಡಿದರು.

‘ರಾಜ್ಯದಾದ್ಯಂತ ನಮೂನೆ 50, 53, 57 ಅಡಿ ಸಾಗುವಳಿ ಜಮೀನಿನ ಸಕ್ರಮಕ್ಕೆ ಸಲ್ಲಿಕೆಯಾಗುತ್ತಿರುವ ಅರ್ಜಿಗಳ ಸಂಖ್ಯೆ ಹೆಚ್ಚುತ್ತಿದೆ. ಅನಧಿಕೃತವಾಗಿ ಸಾಗುವಳಿದಾರರು ಕೃಷಿಯಲ್ಲಿ ತೊಡಗಿದರೆ, ಅಕ್ರಮ-ಸಕ್ರಮ ಅಡಿಯಲ್ಲಿ ಸಾಗುವಳಿ ಚೀಟಿ ನೀಡಲು ಇಲಾಖೆ ಬದ್ಧವಾಗಿದೆ. ಆದರೆ, ಸಾವಿರಾರು ಎಕರೆ ಭೂಮಿ ಅಕ್ರಮ ಸಾಗುವಳಿದಾರರ ಪಾಲಾಗಿದೆ. ಅಧಿಕಾರಿಗಳು ಎಲ್ಲ ಕಡೆಗೆ ತೆರಳಿ ಪರಿಶೀಲಿಸುವುದು ಸಾಧ್ಯವಿಲ್ಲ. ಈ ಆ್ಯಪ್‌ನ ನೆರವಿನಿಂದ ಅಕ್ರಮ ಸಾಗುವಳಿ ಭೂಮಿಯಲ್ಲಿ ಕೃಷಿ ಅಥವಾ ಇತರ ಚಟುವಟಿಕೆ ಬಗ್ಗೆ ಸ್ಯಾಟಲೈಟ್ ಚಿತ್ರದ ಮೂಲಕ ಮಾಹಿತಿ ಪಡೆದು ಅರ್ಜಿ ವಿಲೇವಾರಿ ಮಾಡುವುದು ನ್ಯಾಯಸಮ್ಮತವಾಗಲಿದೆ. ಅರ್ಜಿಗಳ ಶೀಘ್ರ ವಿಲೇವಾರಿಗೂ ಈ ಆ್ಯಪ್ ಸಹಕಾರಿ ಆಗಲಿದೆ’ ಎಂದರು.

ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಆಯುಕ್ತ‌ ಸುನೀಲ್ ಕುಮಾರ್ ಸಭೆಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT