ಬೆಂಗಳೂರು: ಕೆಆರ್‌ಐಡಿಎಲ್ (ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮ) ನಿರ್ವಹಿಸುವ ಕಾಮಗಾರಿಗಳ ಪ್ರಗತಿಯೂ ಸೇರಿದಂತೆ ಎಲ್ಲ ಪ್ರಕ್ರಿಯೆಗಳನ್ನು ಪಾರದರ್ಶಕವಾಗಿ ನಡೆಸಲು ‘ಗಾಂಧಿ ಸಾಕ್ಷಿ ಕಾಯಕ– 2.0’ (ವರ್ಕ್ ಮಾನಿಟರಿಂಗ್ ಸಿಸ್ಟಂ) ತಂತ್ರಾಂಶ ಅಭಿವೃದ್ಧಿಪಡಿಸಲಾಗಿದೆ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

ಈ ತಂತ್ರಾಂಶವನ್ನು ಬುಧವಾರ ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ‘ಕೆಆರ್‌ಐಡಿಎಲ್ ನಿರ್ವಹಿಸುವ ಕಾಮಗಾರಿಗಳ ಸಂಪೂರ್ಣ ಮಾಹಿತಿಗಳು, ಕಾಮಗಾರಿಗಳನ್ನು ವಹಿಸುವ ಇಲಾಖೆಗಳಿಂದ ಬಿಡುಗಡೆಯಾಗುವ ಅನುದಾನದ ಸ್ವೀಕೃತಿ ಹಾಗೂ ಬಳಕೆ, ಸೂಕ್ತ ರೀತಿಯಲ್ಲಿ ಲೆಕ್ಕಪತ್ರಗಳ ನಿರ್ವಹಣೆ ಮುಂತಾದ ವಿವಿಧ ಅಂಶಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಈ ತಂತ್ರಾಂಶದಿಂದ ಸಾಧ್ಯವಾಗಲಿದೆ’ ಎಂದರು.

‘ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಡಿಯಲ್ಲಿ ಕೆಆರ್‌ಐಡಿಎಲ್ ಕಾರ್ಯನಿರ್ವಹಿಸುತ್ತಿದೆ. ನಿರ್ಮಾಣ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಈ ಸಂಸ್ಥೆಯು ರಾಜ್ಯದಾದ್ಯಂತ ತನ್ನ ಜಾಲ ಹೊಂದಿದ್ದು, ಸರ್ಕಾರದ ವತಿಯಿಂದ ಕೈಗೊಳ್ಳಲಾಗುವ ನಿರ್ಮಾಣ ಯೋಜನೆಗಳು ಹಾಗೂ ವಿವಿಧ ಇಲಾಖೆಗಳು ವಹಿಸುವ ಕಟ್ಟಡಗಳು, ರಸ್ತೆ ಅಭಿವೃದ್ಧಿ ಮೊದಲಾದ ಕಾಮಗಾರಿಗಳನ್ನು ಅನುಷ್ಠಾನಗೊಳಿಸುತ್ತಿದೆ. ಕೆಆರ್‌ಐಡಿಎಲ್ ಸಂಸ್ಥೆಯ ವಹಿವಾಟನ್ನು ಪಾರದರ್ಶಕಗೊಳಿಸುವ ಉದ್ದೇಶದಿಂದ ಸೂಕ್ತ ತಂತ್ರಾಂಶವನ್ನು ಇ–ಆಡಳಿತ ಮೂಲಕ ಅಭಿವೃದ್ಧಿಪಡಿಸಲಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.