ಬೆಂಗಳೂರು: ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ಜನ್ಮದಿನದ ಅಂಗವಾಗಿ, ಇಲ್ಲಿನ ಹನುಮಂತ ನಗರದಲ್ಲಿರುವ ‘ನಮ್ಮ ದೇವೇಗೌಡ ಅಪ್ಪಾಜಿ ಕ್ಯಾಂಟೀನ್’ನಲ್ಲಿ ₹1ಕ್ಕೆ ಮುದ್ದೆ ಊಟ ವಿತರಿಸಲಾಯಿತು.

ವಿಧಾನ ಪರಿಷತ್ತಿನ ಸದಸ್ಯರೂ ಆಗಿರುವ ಟಿ.ಎ. ಶರವಣ ಅವರು, ‘ಅಪ್ಪಾಜಿ ಕ್ಯಾಂಟೀನ್’ ನಡೆಸುತ್ತಿದ್ದಾರೆ.

ಮುದ್ದೆ ಊಟದ ಜತೆಗೇ ₹1ಕ್ಕೆ ಉಪಾಹಾರದ ವ್ಯವಸ್ಥೆಯನ್ನೂ ಮಾಡಲಾಗಿತ್ತು. ಸಾವಿರಾರು ಜನರು ಸರದಿಯಲ್ಲಿ ನಿಂತು ಊಟ, ಉಪಾಹಾರ ಸವಿದರು. ಬಿಗ್ಬಾಸ್ ವಿಜೇತ ಗಿಲ್ಲಿ ನಟ ಕಾರ್ಯಕ್ರಮಕ್ಕೆ ಮೆರುಗು ನೀಡಿದರು.

‘ಹಸಿದವರಿಗೆ ಮೊದಲು ಅನ್ನ ನೀಡಬೇಕು ಎಂಬ ದೇವೇಗೌಡರ ಆಶಯದಂತೆ 9 ವರ್ಷಗಳಿಂದ ‘ನಮ್ಮ ದೇವೇಗೌಡ ಅಪ್ಪಾಜಿ ಕ್ಯಾಂಟೀನ್’ ನಡೆಸಿಕೊಂಡು ಬರುತ್ತಿದ್ದೇನೆ. ಅತಿ ಕಡಿಮೆ ಬೆಲೆಯಲ್ಲಿ ಊಟ, ಉಪಾಹಾರ ಒದಗಿಸಲಾಗುತ್ತಿದೆ. ಪ್ರತಿ ದಿನವೂ ಗುಣಮಟ್ಟದ, ಶುಚಿ ಹಾಗೂ ರುಚಿಯಾದ ಆಹಾರ ಸಿಗುತ್ತದೆ. ಕೋವಿಡ್ ಸಮಯದಲ್ಲಿ ಈ ಕ್ಯಾಂಟೀನ್ ಲಕ್ಷಾಂತರ ಜನರ ಹಸಿವು ನೀಗಿಸಿತ್ತು’ ಎಂದು ಶರವಣ ಹೇಳಿದರು.

ಇದೇ ದಿನ ಪೌರ ಕಾರ್ಮಿಕರು ಮತ್ತು ಆಟೊರಿಕ್ಷಾ ಚಾಲಕರಿಗೆ ಉಚಿತವಾಗಿ ಬಟ್ಟೆಗಳನ್ನು ವಿತರಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.