ಬೆಂಗಳೂರು: ಆಹಾರ ಸಚಿವ ಕೆ.ಎಚ್.ಮುನಿಯಪ್ಪ, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ನೇತೃತ್ವದ ನಿಯೋಗ ಒಳ ಮೀಸಲಾತಿ ಮಸೂದೆಗೆ ಅನುಮೋದನೆ ನೀಡುವಂತೆ ಕೋರಿ ರಾಜ್ಯಪಾಲ ಥಾವರಚಂದ್ ಗೆಹಲೋಟ್ ಅವರಿಗೆ ಮಂಗಳವಾರ ಮನವಿ ಸಲ್ಲಿಸಿತು.

ಪರಿಶಿಷ್ಟ ಜಾತಿ ಎಡಗೈ ಸಮುದಾಯದ ಶಾಸಕರು, ವಿಧಾನಪರಿಷತ್ ಸದಸ್ಯರು ಹಾಗೂ ಸಮುದಾಯ ಮುಖಂಡರನ್ನು ಒಳಗೊಂಡ ನಿಯೋಗ ಲೋಕಭವನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿ, ‘ಸಂವಿಧಾನದ ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ಮೌಲ್ಯಗಳಿಗೆ ಅನುಗುಣವಾಗಿ ಪರಿಶಿಷ್ಟ ಜಾತಿಯ 101 ಒಳ ಸಮುದಾಯಗಳಿಗೆ ನ್ಯಾಯಸಮ್ಮತ ಮೀಸಲಾತಿ ಕಲ್ಪಿಸಲು ಮಸೂದೆ ಮಹತ್ವದ ಹೆಜ್ಜೆಯಾಗಿದೆ’ ಎಂದು ಮನವರಿಕೆ ಮಾಡಿಕೊಟ್ಟರು.

ವಿಧಾನಸಭೆ ಮತ್ತು ವಿಧಾನ ಪರಿಷತ್ತಿನಲ್ಲಿ ಆಡಳಿತ ಹಾಗೂ ವಿರೋಧ ಪಕ್ಷಗಳ ಸಹಮತದಿಂದ ಎರಡೂ ಸದನಗಳಲ್ಲಿ ಅಂಗೀಕರಿಸಲ್ಪಟ್ಟ ಒಳಮೀಸಲಾತಿ ಮಸೂದೆಗೆ ಅನುಮೋದನೆ ನೀಡಬೇಕು ಎಂದು ಕೋರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.