ಎಥೆನಾಲ್ ಉತ್ಪಾದನೆ ವಿಚಾರವಾಗಿ ನಿಯಮ ಉಲ್ಲಂಘನೆ ಆರೋಪದಲ್ಲಿ ಕಲಬುರಗಿ ಜಿಲ್ಲೆಯ ಚಿಂಚೋಳಿಯ ಸಿದ್ದಸಿರಿ ಸಕ್ಕರೆ ಕಾರ್ಖಾನೆ ಮುಚ್ಚುವಂತೆ ಮಂಡಳಿ ನೋಟಿಸ್ ನೀಡಿತ್ತು.
ನೋಟಿಸ್ ಪ್ರಶ್ನಿಸಿ ಯತ್ನಾಳ ಹೈಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಕಾರ್ಖಾನೆ ತೆರೆಯಲು ಅನುಮತಿ ನೀಡಿತ್ತು. ‘ಕಾರ್ಖಾನೆಯು ಎಲ್ಲ ನಿಯಮಗಳನ್ನು ಉಲ್ಲಂಘಿಸಿದೆ’ ಎಂದು ಮಂಡಳಿಯು ಅರ್ಜಿಯಲ್ಲಿ ದೂರಿದೆ.