ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪಿಜಿ–ಸಿಇಟಿಗೆ ಅರ್ಜಿ: ಜೂನ್ 20 ಕೊನೆಯ ದಿನ

Published 18 ಜೂನ್ 2024, 16:32 IST
Last Updated 18 ಜೂನ್ 2024, 16:32 IST
ಅಕ್ಷರ ಗಾತ್ರ

ಬೆಂಗಳೂರು: 2024-25ನೇ ಸಾಲಿನ ಸ್ನಾತಕೋತ್ತರ ಕೋರ್ಸುಗಳ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಪಿಜಿ-ಸಿಇಟಿ) ಅರ್ಜಿ ಸಲ್ಲಿಸುವ ಅವಧಿಯನ್ನು ಜೂನ್‌ 20ರವರೆಗೆ ವಿಸ್ತರಿಸಲಾಗಿದೆ.

ಜೂನ್‌ 17ರವರೆಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಅರ್ಜಿ ಸಲ್ಲಿಕೆ ವೇಳೆ ತಾಂತ್ರಿಕ ಸಮಸ್ಯೆಗಳು ಕಾಣಿಸಿಕೊಂಡ ಕಾರಣ ಮೂರು ದಿನ ಹೆಚ್ಚುವರಿ ಅವಧಿ ನೀಡಲಾಗಿದೆ. ಜೂನ್ 21ರೊಳಗೆ ಶುಲ್ಕ ಪಾವತಿಸಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೇಳಿದೆ.

ಎಂ.ಟೆಕ್, ಎಂ.ಇ., ಎಂ.ಆರ್ಕಿಟೆಕ್ಚರ್ ಕೋರ್ಸ್‌ಗಳ ಪ್ರವೇಶ ಪರೀಕ್ಷೆ ಜುಲೈ 13 ಹಾಗೂ ಎಂ.ಸಿ.ಎ ಮತ್ತು ಎಂ.ಬಿ.ಎ. ಕೋರ್ಸ್‌ಗಳ ಪ್ರವೇಶ ಪರೀಕ್ಷೆಯನ್ನು ಜುಲೈ 14ರಂದು ನಡೆಯಲಿದೆ.   

ಗೇಟ್ (ಜಿಎಟಿಇ) ಪರೀಕ್ಷೆಯಲ್ಲಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳು ಪಿಜಿ–ಸಿಇಟಿಗೆ ಹಾಜರಾಗುವ ಅಗತ್ಯವಿಲ್ಲ. ಆದರೆ, ಅಂತಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಿ, ಪ್ರವೇಶಕ್ಕೆ ಅರ್ಹರಾಗಬೇಕಾಗುತ್ತದೆ. ಗೇಟ್‌ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದಲ್ಲೇ ಸ್ನಾತಕೋತ್ತರ ಕೋರ್ಸ್‌ಗಳಿಗೆ ಪ್ರವೇಶ ನೀಡಲಾಗುತ್ತದೆ ಎಂದು ವಿವರ ನೀಡಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT