ಮಂಗಳವಾರ, 25 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Published 9 ಜೂನ್ 2024, 12:54 IST
Last Updated 9 ಜೂನ್ 2024, 12:54 IST
ಅಕ್ಷರ ಗಾತ್ರ

ಉಡುಪಿ: ಮಂಗಳೂರಿನ ಮುಳಿಹಿತ್ಲುವಿನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಫೆಡರೇಷನ್ ಅಧ್ಯಕ್ಷ, ಶಾಸಕ ಯಶ್‍ಪಾಲ್ ಎ. ಸುವರ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಫೆಡರೇಶನ್ ಸದಸ್ಯರ ಮಕ್ಕಳು 2023–24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ 85, ದ್ವಿತೀಯ ಪಿಯುಸಿ/ತತ್ಸಮಾನ ತಾಂತ್ರಿಕ ಪರೀಕ್ಷೆಯಲ್ಲಿ ಶೇ 80, 2022–23ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಶೇ 70, ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಶೇ 60 ಅಂಕ ಗಳಿಸಿರಬೇಕು.

ಇತರ ವಿದ್ಯಾರ್ಥಿಗಳು 2023–24ನೇ ಸಾಲಿನಲ್ಲಿ ಎಸ್‌ಎಸ್ಎಲ್‌ಸಿ ಪರೀಕ್ಷೆಯಲ್ಲಿ ಶೇ 95, ದ್ವಿತೀಯ ಪಿಯುಸಿ/ತತ್ಸಮಾನ ತಾಂತ್ರಿಕ ಪರೀಕ್ಷೆಯಲ್ಲಿ ಶೇ 85, 2022–23ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಶೇ 75, ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಶೇ 70 ಅಂಕ ಗಳಿಸಿರಬೇಕು.

ಜುಲೈ 15 ಅರ್ಜಿ ಸಲ್ಲಿಸಲು ಕೊನೆಯ ದಿನ. ಮೀನುಗಾರಿಕಾ ಪ್ರಾಥಮಿಕ ಸಹಕಾರಿ ಸಂಘಗಳು ಮತ್ತು ಫೆಡರೇಶನ್‍ನ ಶಾಖಾ ಕಚೇರಿಗಳಲ್ಲಿ ಅರ್ಜಿ ಲಭ್ಯವಿದ್ದು, ಮಾಹಿತಿಗೆ 6364931790 ಸಂಪರ್ಕಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT