ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರನ್ನು ಆಯ್ಕೆ ಮಾಡಿಕೊಳ್ಳಲು ಕಾಲೇಜು ಶಿಕ್ಷಣ ಇಲಾಖೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಸೆ.7 ಕೊನೆಯ ದಿನ.
ಸೆ.8ಕ್ಕೆ ಅರ್ಹತಾ ಪಟ್ಟಿ ಹಾಗೂ11ಕ್ಕೆ ಕಾರ್ಯಭಾರದ ವಿವರ ಪ್ರಕಟಿಸಲಾಗುತ್ತದೆ. 17ರಂದು ಕಾಲೇಜುಗಳ ಆಯ್ಕೆಗೆ ಕೌನ್ಸೆಲಿಂಗ್ ನೆಡೆಸಲಾಗುತ್ತದೆ.
ಈಗಾಗಲೇ ಕೆಲಸ ಮಾಡುತ್ತಿದ್ದ ಅತಿಥಿ ಉಪನ್ಯಾಸಕರು ಅದೇ ಕಾಲೇಜಿನಲ್ಲಿ ಮುಂದುವರಿಯಲು ಬಯಸಿದರೆ ಅಂಥವರು ಕೌನ್ಸೆಲಿಂಗ್ ನಲ್ಲಿ ಭಾಗವಹಿಸುವ ಅಗತ್ಯವಿಲ್ಲ. ಆಯ್ಕೆ ಪಟ್ಟಿ ಪ್ರಕಟಿಸಿದ ನಂತರ ಆಯಾ ಕಾಲೇಜುಗಳಿಗೆ ತೆರಳಿ ವರದಿ ಮಾಡಿಕೊಳ್ಳಬಹುದು.