ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಜ್ಯ ಸರ್ಕಾರದ ವಕ್ತಾರರಾಗಿ 5 ಸಚಿವರ ನೇಮಕ

Published 13 ಮಾರ್ಚ್ 2024, 15:08 IST
Last Updated 13 ಮಾರ್ಚ್ 2024, 15:08 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಸರ್ಕಾರದ ಸಾಧನೆ, ಕಾರ್ಯವೈಖರಿ ಮತ್ತು ಯೋಜನೆಗಳನ್ನು ಜನರಿಗೆ ತಿಳಿಸಲು ಐವರು ಪ್ರಭಾವಿ ಸಚಿವರನ್ನು ವಕ್ತಾರರನ್ನಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇಮಿಸಿದ್ದಾರೆ.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್​ ಖರ್ಗೆ, ಅರಣ್ಯ ಸಚಿವ ಈಶ್ವರ ಖಂಡ್ರೆ ಮತ್ತು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನು ರಾಜ್ಯ ಸರ್ಕಾರದ ವಕ್ತಾರರಾಗಿ ನೇಮಿಸಲಾಗಿದೆ.

ಈ ಕುರಿತು ಮುಖ್ಯ ಕಾರ್ಯದರ್ಶಿಗೆ ಟಿಪ್ಪಣಿ ಕಳುಹಿಸಿರುವ ಮುಖ್ಯಮಂತ್ರಿ, ‘ಈ ಸಚಿವರಿಗೆ ದಾಖಲೆಗಳು ಮತ್ತು ಮಾಹಿತಿಗಳನ್ನು ಕಾಲ ಕಾಲಕ್ಕೆ ಒದಗಿಸುವಂತೆ ಎಲ್ಲ ಇಲಾಖೆಗಳ ಮುಖ್ಯಸ್ಥರಿಗೆ ಸೂಚಿಸಬೇಕು’ ಎಂದೂ ನಿರ್ದೇಶನ ನೀಡಿದ್ದಾರೆ.

ಸಿದ್ದರಾಮಯ್ಯ ಅವರ ಆಪ್ತ ಬಣದಲ್ಲಿ ಈ ಐವರು ಸಚಿವರು ಗುರುತಿಸಿಕೊಂಡಿದ್ದಾರೆ. ರಾಜ್ಯ ಸರ್ಕಾರದ ಕಾರ್ಯವೈಖರಿಯನ್ನು ಟೀಕಿಸಿ ಬಿಜೆಪಿ ಮತ್ತು ಜೆಡಿಎಸ್‌ ಮಾಡುವ ಆರೋಪಗಳಿಗೆ ಸದನದ ಒಳಗೆ ಮತ್ತು ಹೊರಗೆ ಈ ಸಚಿವರು ಸಮರ್ಥವಾಗಿ ಪ್ರತ್ಯುತ್ತರ ನೀಡುತ್ತಲೇ ಬಂದಿದ್ದಾರೆ‌. ಲೋಕಸಭೆ ಚುನಾವಣೆ ಸಂದರ್ಭದಲ್ಲಿಯೂ ವಿರೋಧ ಪಕ್ಷಗಳ ಆರೋಪಗಳಿಗೆ ಸೂಕ್ತ ರೀತಿಯಲ್ಲಿ ಉತ್ತರ ನೀಡಲು ಇವರಿಗೆ ಹೊಣೆಗಾರಿಕೆ ನೀಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT