ಬೆಂಗಳೂರು: ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಸಂಬಂಧಿಸಿದ ಪ್ರಕರಣ ಹೈಕೋರ್ಟ್ನಲ್ಲಿದ್ದು, ನ್ಯಾಯಾಲಯ ತೀರ್ಪು ನೀಡಿದ ನಂತರವಷ್ಟೇ ನೇಮಕಾತಿ ಆದೇಶಗಳನ್ನು ನೀಡಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದರು.

ವಿಧಾನ ಪರಿಷತ್ನಲ್ಲಿ ಬಿಜೆಪಿ ಚಿದಾನಂದ ಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ‘2023ರ ಮಾರ್ಚ್ನಲ್ಲಿ 1,208 ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ. ಈ ಪಟ್ಟಿಯಿಂದ ಬಾಧಿತರಾದ ಅಭ್ಯರ್ಥಿಗಳು ಕೆಎಟಿ ಮೊರೆ ಹೋಗಿದ್ದರು. ಅಲ್ಲಿ ಅರ್ಜಿ ವಜಾಗೊಂಡಿತ್ತು. ಅದನ್ನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ಅಲ್ಲಿನ ಆದೇಶದ ಮೇರೆಗೆ ನಾವು ಮುಂದುವರಿಯಬೇಕಾಗುತ್ತದೆ. ಷರತ್ತು ಬದ್ಧ ನೇಮಕಾತಿ ಆದೇಶ ನೀಡಲು ಸಾಧ್ಯವಿಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.