ಭಾನುವಾರ, 3 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಪಂ ಅಧ್ಯಕ್ಷರ ಅಧಿಕಾರ ಮೊಟಕು ಪ್ರಸ್ತಾವ ತಿರಸ್ಕಾರ: ಆರಗ ಜ್ಞಾನೇಂದ್ರ

Last Updated 11 ಅಕ್ಟೋಬರ್ 2022, 19:18 IST
ಅಕ್ಷರ ಗಾತ್ರ

ಬೆಂಗಳೂರು: ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರಿಗೆ ಪ್ರಸ್ತುತ ಇರುವ ಯಾವುದೇ ಅಧಿಕಾರವನ್ನು ಕಡಿತಗೊಳಿಸುವ ಪ್ರಸ್ತಾವವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರಸ್ಕರಿಸಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ಮುಖ್ಯಮಂತ್ರಿ ಅವರನ್ನು ಮಂಗಳವಾರ ಬೆಳಿಗ್ಗೆ ಭೇಟಿ ಮಾಡಿದ ಅವರು, ಅಧಿಕಾರ ಮೊಟಕುಗೊಳಿಸುವ ಪ್ರಸ್ತಾವ
ದ ಕುರಿತು ಗ್ರಾಮ ಪಂಚಾಯಿತಿಗಳ ಚುನಾಯಿತ ಪ್ರತಿನಿಧಿಗಳಲ್ಲಿ ಉಂಟಾಗಿರುವ ಆತಂಕವನ್ನು ಗಮನಕ್ಕೆ ತಂದರು.

ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಕರ್ನಾಟಕ ಗ್ರಾಮ ಸ್ವರಾಜ್ ಹಾಗೂ ಪಂಚಾಯತ್ ರಾಜ್ ಕಾಯ್ದೆಗೆ ತಿದ್ದುಪಡಿ ತರುವ ಪ್ರಸ್ತಾವವನ್ನು ಮುಖ್ಯಮಂತ್ರಿ ತಿರಸ್ಕರಿಸಿದ್ದಾರೆ. ಗ್ರಾಮ ಪಂಚಾಯಿತಿಗಳು ಪ್ರಜಾಪ್ರಭುತ್ವ ವ್ಯವಸ್ಥೆಯ ಭದ್ರ ಬುನಾದಿ. ಗ್ರಾಮೀಣ ಭಾಗದಲ್ಲಿ ಭವಿಷ್ಯದ ನಾಯಕತ್ವ ರೂಪಿಸುವಲ್ಲಿ ಗಣನೀಯ ಕೊಡುಗೆ ನೀಡುತ್ತಿವೆ. ಈ ವ್ಯವಸ್ಥೆಯನ್ನು ಬಲಪಡಿಸುವ ಹಾಗೂ ಅಧಿಕಾರ ವಿಕೇಂದ್ರಿಕರಣಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಬದ್ಧತೆ ಹೊಂದಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT