ಬೆಂಗಳೂರು: ಮುಂಬರುವ ಚುನಾವಣೆಯ ಮೇಲೆ ಕಣ್ಣಿಟ್ಟು, ಪಕ್ಷದ ಚಟುವಟಿಕೆಗೆ ಚುರುಕು ನೀಡುವ ಉದ್ದೇಶದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಉಸ್ತುವಾರಿ ಸಮಿತಿಯ ಅಧ್ಯಕ್ಷರನ್ನಾಗಿ ಅರಕಲಗೂಡು ಶಾಸಕ ಎ. ಮಂಜು ಅವರನ್ನು ಜೆಡಿಎಸ್ ನೇಮಿಸಿದೆ.

ಬೆಂಗಳೂರು ಕೇಂದ್ರ, ಪಶ್ಚಿಮ, ದಕ್ಷಿಣ, ಪೂರ್ವ ಮತ್ತು ಉತ್ತರ ಪಾಲಿಕೆಗಳ ವ್ಯಾಪ್ತಿಯಲ್ಲಿ ಪಕ್ಷ ಸಂಘಟನೆಯನ್ನು ಬಲಪಡಿಸಲು ಈ ಸಮಿತಿ ಕೆಲಸ ಮಾಡಲಿದೆ.

ಶಾಸಕರಾದ ಎಂ.ಟಿ. ಕೃಷ್ಣಪ್ಪ, ವಿಧಾನ ಪರಿಷತ್ ಸದಸ್ಯರಾದ ಟಿ.ಎ. ಶರವಣ, ಟಿ.ಎನ್. ಜವರಾಯಿಗೌಡ, ಸಿ.ಎನ್. ಮಂಜೇಗೌಡ, ಯುವ ಜನತಾದಳ ರಾಜ್ಯ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಸಮನ್ವಯ ಸಮಿತಿಯ ನೂತನ ಅಧ್ಯಕ್ಷ ಎಂ. ಕೃಷ್ಣಾರೆಡ್ಡಿ, ಮಾಜಿ ಶಾಸಕರಾದ ಸುರೇಶ್ ಗೌಡ, ಎ. ಮಂಜುನಾಥ್, ವಿಧಾನ ಪರಿಷತ್ ಮಾಜಿ ಸದಸ್ಯರಾದ ಎಚ್.ಎಂ. ರಮೇಶ್ ಗೌಡ, ಕೆ.ಎ. ತಿಪ್ಪೇಸ್ವಾಮಿ, ಎಲ್.ಎನ್. ನಾರಾಯಣಸ್ವಾಮಿ, ಪಕ್ಷದ ಮುಖಂಡರಾದ ಜಗದೀಶ್ ನಾಗರಾಜಯ್ಯ, ಆರ್. ಪ್ರಕಾಶ್, ಜೆಡಿಎಸ್ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ರಶ್ಮಿ ರಾಮೇಗೌಡ ಈ ಸಮಿತಿಯಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.