ಅರಸೀಕೆರೆ: ‘ಮುಖಂಡ ಬಿಳಿಚೌಡಯ್ಯ ಅವರು ಹಿಂದುಳಿದ ಸಮುದಾಯಗಳನ್ನು ಬಳಸಿಕೊಂಡು ರಾಜಕೀಯ ಹಾಗೂ ಆರ್ಥಿಕವಾಗಿ ಬೆಳೆದರೆ ಹೊರತು, ಸಮಾಜದ ಏಳಿಗೆಗೆ ಯಾವುದೇ ಕೊಡುಗೆ ನೀಡಿಲ್ಲ’ ಎಂದು ಗ್ರಾ.ಪಂ ಮಾಜಿ ಅಧ್ಯಕ್ಷ ಅಮ್ಮನಟೆ ಅಜ್ಜಪ್ಪ, ಸದಸ್ಯ ಜಯರಾಮ್ ಮತ್ತು ಕುರುಬ ಸಮುದಾಯದ ಮುಖಂಡ ಮಹಾಲಿಂಗಪ್ಪ ದೂರಿದರು.

ಸಂಘದ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಿಳಿ ಚೌಡಯ್ಯ ಹಿಂದುಳಿದ ಸಮುದಾಯಗಳ ಬೆಂಬಲದಿಂದಲೇ ರಾಜಕೀಯವಾಗಿ ಮೇಲೆ ಬಂದವರು. ಆದರೆ ಕುರುಬ, ಯಾದವ, ಲಂಬಾಣಿ ಸೇರಿದಂತೆ ಅನೇಕ ಸಮುದಾಯಗಳು ಅವರ ಹಿಂದೆ ನಿಂತಿದ್ದರೂ, ಅವರಲ್ಲಿ ಯಾರೊಬ್ಬರನ್ನೂ ಬೆಳೆಸುವ ಕೆಲಸ ಮಾಡಿಲ್ಲ. ಸಮಾಜದ ನಂಬಿಕೆಯನ್ನು ರಾಜಕೀಯ ಲಾಭಕ್ಕೆ ಮಾತ್ರ ಬಳಸಿಕೊಂಡಿದ್ದಾರೆ’ ಎಂದು ಆರೋಪಿಸಿದರು.

‘ಈ ಹಿಂದೆ ವಿಧಾನಸಭಾ ಚುನಾವಣೆ ಯಲ್ಲಿ ಸ್ಪರ್ಧಿಸಿದ್ದ ಸಂದರ್ಭದಲ್ಲಿ ಇದೇ ಹಿಂದುಳಿದ ಸಮುದಾಯಗಳು ಅವರಿಗೆ ಬೆಂಬಲ ನೀಡಿದ್ದವು. ಆದರೆ ಇಂದು ಅವರು ಶಾಸಕರನ್ನು ಹೊಗಳಿಕೊಳ್ಳುತ್ತಲೇ ತಮ್ಮ ಸ್ವಾರ್ಥ ರಾಜಕೀಯ ಮುಂದುವರಿಸುತ್ತಿದ್ದಾರೆ. ಸಮಾಜದ ಅಭಿವೃದ್ಧಿಗೆ ಯಾವುದೇ ಯೋಜನೆ ಅಥವಾ ಅವಕಾಶ ಒದಗಿಸುವಲ್ಲಿ ವಿಫಲರಾಗಿದ್ದಾರೆ’ ಎಂದು ಕಿಡಿಕಾರಿದರು.

‘ನಗರಸಭೆ, ಪ್ರಾಧಿಕಾರದ ಹುದ್ದೆಗಳ ಆಯ್ಕೆಯಲ್ಲಿ ಹಿಂದುಳಿದ ಸಮುದಾಯದವರಿಗೆ ಅವಕಾಶ ಕಲ್ಪಿಸಬೇಕಾಗಿತ್ತು. ಚುನಾವಣೆ ಇಲ್ಲದೆ ನೇಮಕವಾಗುವ ಹುದ್ದೆಗಳಲ್ಲಿ ಹಿಂದುಳಿದ ಸಮುದಾಯಕ್ಕೆ ಆದ್ಯತೆ ನೀಡಬೇಕಾಗಿತ್ತು. ಆದರೆ ಶಾಸಕರ ಸೂಚನೆಯಂತೆ ಅರುಣ್ ಕುಮಾರ್ ಅವರಿಗೆ ಹುದ್ದೆ ನೀಡಲಾಗಿದೆ. ಈ ನೇಮಕಾತಿಯಲ್ಲಿ ಹಣದ ವ್ಯವಹಾರ ನಡೆದಿದೆ ಎಂಬ ಗಂಭೀರ ಆರೋಪಗಳು ಕೇಳಿಬರುತ್ತಿವೆ’ ಎಂದು ದೂರಿದರು.

ಪ್ರಾಧಿಕಾರದ ಅಧ್ಯಕ್ಷ ಸ್ಥಾನವನ್ನು ಹಿಂದುಳಿದ ಸಮುದಾಯದವರಿಗೆ ನೀಡದಿದ್ದರೆ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ಹಾಗೂ ಪ್ರತಿಭಟನೆಗಳನ್ನು ಕೈಗೊಳ್ಳಬೇಕಾಗುತ್ತದೆ. ಸಮಾಜದ ಹಕ್ಕುಗಳನ್ನು ಕಾಪಾಡಲು ನಾವು ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಮುಖಂಡರಾದ ಭರತ್, ಭಾಸ್ಕರ್, ರಂಗಸ್ವಾಮಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-36-2142311962

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.