ಅರಸೀಕೆರೆ: ‘ರಾಜಕಾರಣದ ಏರಿಳಿತವನ್ನು ಅರಿತಿರುವ ಮುಖಂಡ ಎನ್.ಆರ್. ಸಂತೋಷ್ ಅವರು ಯಾರಿಂದಲೂ ರಾಜಕೀಯದ ನೀತಿ ಪಾಠ ಕಲಿಯುವ ಅವಶ್ಯಕತೆ ಇಲ್ಲ’ ಎಂದು ದುಮ್ಮೇನಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಅಜ್ಜಪ್ಪ ಅವರು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಗೀಜಿಹಳ್ಳಿ ಧರ್ಮಶೇಖರ್ ಹೇಳಿಕೆಗೆ ತಿರುಗೇಟು ನೀಡಿದರು.

‘ವೈಯಕ್ತಿಕ ಏಳಿಗೆ ಹಾಗೂ ಸ್ವಾರ್ಥಕ್ಕಾಗಿ ಸಮಾಜವನ್ನು ಬಲಿಕೊಟ್ಟು ರಾಜಕಾರಣ ಮಾಡುತ್ತಿರುವ ಧರ್ಮಶೇಖರ್ ಅವರು ಸಂತೋಷ್ ಅವರ ವಿರುದ್ಧ ಮಾತನಾಡುವ ನೈತಿಕತೆ ಇಲ್ಲ’ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

‘ಸಂತೋಷ್ ಅವರಲ್ಲಿರುವ ಜನಪರ ನಿಲುವು, ಹೋರಾಟದ ಮನೋಭಾವವನ್ನು ಮೆಚ್ಚಿಯೇ ಕ್ಷೇತ್ರದ ಮತದಾರರು ಕಳೆದ ವಿಧಾನಸಭಾ ಚುನಾವಣೆಯಲ್ಲಿ 80 ಸಾವಿರಕ್ಕೂ ಹೆಚ್ಚಿನ ಮತಗಳನ್ನು ನೀಡುವ ಮೂಲಕ ಆಶೀರ್ವದಿಸಿದ್ದಾರೆ. ಅಲ್ಪ ಮತಗಳಿಂದ ಸೋತಿದ್ದರೂ ಕ್ಷೇತ್ರದ ಜನತೆಯ ದನಿಯಾಗಿ ಅಕ್ರಮಗಳ ವಿರುದ್ಧ ಹೋರಾಟ ಮಾಡುತ್ತಿದ್ದಾರೆ’ ಎಂದು ಸಮರ್ಥಿಸಿಕೊಂಡರು.

‘ಇದರಿಂದ ಹತಾಶರಾಗಿರುವ ಶಾಸಕರು ಮತ್ತು ಅವರ ಹಿಂಬಾಲಕರು ಸಂತೋಷ್ ವಿರುದ್ಧ ದುರುದ್ದೇಶ ಪೂರಕವಾಗಿ ಹೇಳಿಕೆ ನೀಡುತ್ತಿರುವುದನ್ನು ಸಹ ಕ್ಷೇತ್ರದ ಜನತೆ ನೋಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಸರಿಯಾದ ಉತ್ತರ ನೀಡುತ್ತಾರೆ’ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಗೀಜಿಹಳ್ಳಿ ಮಲ್ಲಿಕಾರ್ಜುನ, ಯಳವಾರೆ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಲಿಂಗರಾಜು, ರಾಘವೇಂದ್ರ, ಚಂದ್ರಶೇಖರ್ ಹಾಗೂ ಮುಖಂಡರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-36-797201740

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.