ಬೆಂಗಳೂರು: ಕೃಷಿ ಮಾರಾಟ ವಾಹಿನಿ ವೆಬ್‌ಸೈಟ್‌ನಲ್ಲಿ ಅಡಿಕೆಯನ್ನು ಡ್ರಗ್ಸ್ ಆ್ಯಂಡ್ ನಾರ್ಕೊಟಿಕ್ ವಿಭಾಗದಲ್ಲಿ ಸೇರಿಸಲಾಗಿದ್ದು, ಈ ಲೋಪ ಎಸಗಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿಯ ಹಲವು ಶಾಸಕರು ಒತ್ತಾಯಿಸಿದರು.

ವಿಧಾನಸಭೆಯಲ್ಲಿ ಶುಕ್ರವಾರ ಶೂನ್ಯ ವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಹರತಾಳು ಹಾಲಪ್ಪ, ‘ಸರ್ಕಾರದ ಸೂಚನೆಯ ಮೇರೆಗೆ ವೆಬ್‌ಸೈಟ್‌ನಲ್ಲಿ ಸೇರಿಸಲಾಗಿದೆಯೇ ಅಥವಾ ಅಧಿಕಾರಿಗಳೇ ಈ ತೀರ್ಮಾನ ತೆಗೆದುಕೊಂಡಿದ್ದಾರಾ’ ಎಂದು ಪ್ರಶ್ನಿಸಿದರು.

‘ಈ ವಿಭಾಗದಲ್ಲಿ ಸೇರಿಸಿದ್ದರಿಂದ ಒಂದೇ ದಿನದಲ್ಲಿ ಅಡಿಕೆಯ ಧಾರಣೆ ₹5 ಸಾವಿರದಷ್ಟು ಕಡಿಮೆ ಆಗಿದೆ. ಈಗ ಅಡಿಕೆ ಕೊಯಿಲಿನ ಸಮಯ. ಅಡಿಕೆ ಕೊಯಿಲಿಗೆ ಬಂದಾಗಲೇ ಇಂತಹ ವಿಚಾರಗಳು ಮುನ್ನೆಲೆಗೆ ಬರುತ್ತವೆ. ಬೆಲೆ ಕುಸಿದು ರೈತರಿಗೆ ಅನ್ಯಾಯವಾಗುತ್ತಿದೆ’ ಎಂದರು.

ಆರಗ ಜ್ಞಾನೇಂದ್ರ, ‘ವೆಬ್‌ಸೈಟ್‌ನಲ್ಲಿ ಅಡಿಕೆಯನ್ನು ಸೇರಿಸಿದ ಮಹಾನುಭವರು ಯಾರು ಎಂಬ ಬಗ್ಗೆ ತನಿಖೆ ನಡೆಸಬೇಕು’ ಎಂದು ಆಗ್ರಹಿಸಿದರು. ಮಾಡಾಳು ವಿರೂಪಾಕ್ಷಪ್ಪ, ಎಂ.ಪಿ.ಕುಮಾರಸ್ವಾಮಿ ಮತ್ತಿತರರು ಧ್ವನಿಗೂಡಿಸಿದರು.

ಪ್ರತಿಕ್ರಿಯಿಸಿದ ಗೃಹ ಹಾಗೂ ಕಾನೂನು ಸಚಿವ ಬಸವರಾಜ ಬೊಮ್ಮಾಯಿ , ‘ಎಪಿಎಂಸಿ ಸಚಿವರ ಗಮನಕ್ಕೆ ತಂದು ಈ ಲೋಪ ಸರಿಪಡಿಸಲಾಗುವುದು’ ಎಂದು ಭರವಸೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.