ಬುಧವಾರ, 18 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಅರ್ಜುನ್ ಕ್ಷಮೆ ಕೇಳುವುದು ದೊಡ್ಡತನ, ನಾನು ಶ್ರುತಿ ಹರಿಹರನ್ ಪರ: ‍ಪ್ರಕಾಶ್‌ ರೈ

ಫಾಲೋ ಮಾಡಿ
Comments

ಬೆಂಗಳೂರು: ಶ್ರುತಿ ಹರಿಹರನ್ ಕನ್ನಡ ಚಿತ್ರರಂಗ ಕಂಡ ಪ್ರತಿಭಾವಂತೆ..ದಿಟ್ಟ ಹೆಣ್ಣು. ಅರ್ಜುನ್ ಸರ್ಜಾ ಕೂಡ ಕನ್ನಡದ ಹೆಮ್ಮೆ.ನಾನು ಶ್ರುತಿ ಹರಿಹರನ್ ರವರ ಪರವಾಗಿ.. ಈ ಮೂಲಕ ಎಲ್ಲಾ ನೊಂದ ಹೆಣ್ಣು ಮಕ್ಕಳ ಪರವಾಗಿ ನಿಲ್ಲುತ್ತೇನೆ ಎಂದು ನಟ ಪ್ರಕಾಶ್‌ ರೈ ತಿಳಿಸಿದ್ದಾರೆ.

ಅರ್ಜುನ್ ಸರ್ಜಾ ಹಿರಿಯ ನಟರೂ ಎಂಬುದನ್ನೂ ಮರೆಯದಿರೋಣ. ಆದರೆ ಶ್ರುತಿಯವರ ಆರೋಪದ ಹಿನ್ನೆಲೆಯಲ್ಲಿ.. ಆ ಹೆಣ್ಣು ಅನುಭವಿಸಿದ ಅಸಹಾಯಕತೆ...ಅವಮಾನ...ಇಷ್ಟು ದಿನಗಳ ಕಾಲ ತನ್ನೊಳಗೆ ಹುದುಗಿಸಿಟ್ಟ ಆ ಗಾಯದ ನೋವನ್ನು ಅರ್ಥಮಾಡಿಕೊಳ್ಳಬೇಕಾಗಿದೆ.

ಅರ್ಜುನ್ ರವರು ಈ ಆರೋಪವನ್ನು ಅಲ್ಲಗಳೆದರೂ.. ಅವರ ಆ ದಿನದ ವರ್ತನೆ ಆಕೆಯಲ್ಲಿ ಉಂಟುಮಾಡಿದ ನೋವಿಗಾಗಿ ಕ್ಷಮೆ ಕೇಳುವುದು ದೊಡ್ಡತನದ ಲಕ್ಷಣ ಎಂದು ಪ್ರಕಾಶ್‌ ರೈ ಹೇಳಿದರು.

ಅರಿತೋ ಅರಿಯದೆಯೋ ನಾವು ಗಂಡಸರು ಹುಟ್ಟಿನಿಂದಲೇ ಹೆಣ್ಣೀನ ಬೇಕು ಬೇಡಗಳ ಬಗ್ಗೆ ಸೂಕ್ಷಮತೆಯನ್ನು ಕಳೆದುಕೊಂಡಿರುವುದು ನಿಜ. ಹೆಣ್ಣುಮಕ್ಕಳೂ ತಮ್ಮ ಹಕ್ಕನ್ನು ಅರಿಯದೆ ಇರುವುದೂ ಅಷ್ಟೇ ನಿಜ ಎಂದರು.

ಪ್ರಸ್ತುತ ಹೆಣ್ಣುಮಕ್ಕಳ ಈ ‘MeToo' ಅಭಿಯಾನ ಮುಂದಿನ ದಿನಗಳಲ್ಲಾದರೂ ನಮ್ಮ ಸಮಾಜದಲ್ಲಿ ಅವರ ಮೇಲಿನ ಶತಮಾನಗಳ ದೌರ್ಜನ್ಯಕ್ಕೆ, ಅವಮಾನಗಳಿಗೆ, ಅಸಹಾಯಕತೆಗೆ, ಕೊನೆಯನ್ನು ಕಾಣಲಿ ಎಮದು ಅವರು ಪ್ರಜಾವಾಣಿಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT