ಸುವರ್ಣ ವಿಧಾನಸೌಧ (ಬೆಳಗಾವಿ): ಸರ್ಕಾರಿ ನೌಕರರಿಗೆ ಜಾರಿಗೆ ತಂದಿರುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಅನುದಾನಿತ ಶಾಲಾ–ಕಾಲೇಜು ಸಿಬ್ಬಂದಿಗೂ ಅನ್ವಯಿಸುವ ಕುರಿತು ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ಶಿಕ್ಷಕರ ಕ್ಷೇತ್ರವನ್ನು ಪ್ರತಿನಿಧಿಸುವ ಎಸ್.ಎಲ್.ಬೋಜೇಗೌಡ, ಪುಟ್ಟಣ್ಣ, ಶಶೀಲ್ ನಮೋಶಿ, ಎಸ್.ವಿ.ಸಂಕನೂರ, ಡಿ.ಟಿ.ಶ್ರೀನಿವಾಸ್, ರಾಮೋಜಿಗೌಡ ಅವರ ಪ್ರಶ್ನೆಗಳಿಗೆ ಉತ್ತರ ನೀಡಿದ ಅವರು, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಜತೆ ಚರ್ಚಿಸಿ, ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.

ಪ್ರಾಥಮಿಕ ಶಾಲಾ ಶಿಕ್ಷಕರ ಬಡ್ತಿ ಕುರಿತು ಈಗಾಗಲೇ ಸಂಪುಟ ಸಮ್ಮತಿ ನೀಡಿದೆ. ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ 2015 ರಿಂದ 2020ರವರೆಗೆ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅನುಮತಿ ನೀಡಲಾಗಿದ್ದು, ಮುಂದಿನ ಶೈಕ್ಷಣಿಕ ಅವಧಿಯ ಒಳಗೆ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು. ಮೊಟ್ಟೆ ದರ ಹೆಚ್ಚಳ ಸಮಸ್ಯೆ ಸೇರಿದಂತೆ ಎಲ್ಲ ಸಮಸ್ಯೆಗಳನ್ನೂ ಕಾಲಮಿತಿಯ ಒಳಗೆ ಬಗೆಹರಿಸಲಾಗುವುದು ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.