ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನತಾ ದರ್ಶನದಲ್ಲಿ ಪಿಎಸ್‌ಐ ಪರೀಕ್ಷಾರ್ಥಿಗಳ ಬಂಧನ: ವಿಜಯೇಂದ್ರ ಟೀಕೆ

Published 27 ನವೆಂಬರ್ 2023, 14:46 IST
Last Updated 27 ನವೆಂಬರ್ 2023, 14:46 IST
ಅಕ್ಷರ ಗಾತ್ರ

ಬೆಂಗಳೂರು: ಪಿಎಸ್‌ಐ ಹುದ್ದೆಗಳ ಮರುಪರೀಕ್ಷೆಗೆ ಅತ್ಯಂತ ಕಡಿಮೆ ಕಾಲಾವಕಾಶ ನಿಗದಿ ಮಾಡಿದ್ದನ್ನು ಪ್ರತಿಭಟಿಸಿ, ಸಮಯ ವಿಸ್ತರಣೆಗೆ ಜನತಾದರ್ಶನದಲ್ಲಿ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಲು ಬಂದಿದ್ದ ಪರೀಕ್ಷಾರ್ಥಿಗಳನ್ನು ಪೊಲೀಸರು ಬಂಧಿಸಿರುವುದು ಖಂಡನಾರ್ಹ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಈ ಕುರಿತು ‘ಎಕ್ಸ್‌’ ಮೂಲಕ ಪೊಲೀಸರ ಕ್ರಮವನ್ನು ಟೀಕಿಸಿರುವ ಅವರು, 545 ಪಿಎಸ್‌ಐ ಹುದ್ದೆಗಳ ಮರುಪರೀಕ್ಷೆಗೆ ತಯಾರಿಗಾಗಿ ಹೆಚ್ಚಿನ ಕಾಲಾವಕಾಶ ನೀಡಲೇಬೇಕು ಎಂದು ಒತ್ತಾಯಿಸಿದರು.

ಪರೀಕ್ಷಾ ಹಗರಣದಿಂದ ಈ ಮೊದಲೇ ಹೈರಾಣಾಗಿ ಹೋಗಿರುವ ಪಿಎಸ್‌ಐ ಹುದ್ದೆಗಳ ಆಕಾಂಕ್ಷಿಗಳ ಮನವಿ ಅತ್ಯಂತ ನ್ಯಾಯ ಸಮ್ಮತವಾಗಿದ್ದು, ಇದನ್ನು ಮುಖ್ಯಮಂತ್ರಿಯವರು ಸಹಾನುಭೂತಿಯಿಂದ ಪರಿಶೀಲಿಸಬೇಕಿತ್ತು. ಆದರೆ, ಪೊಲೀಸರನ್ನು ಬಿಟ್ಟು ಬಂಧಿಸಿದ ಕ್ರಮ ಕಾಂಗ್ರೆಸ್ ಸರ್ಕಾರಕ್ಕೆ, ಅಮಾಯಕ ನಿರುದ್ಯೋಗಿಗಳ ಮೇಲೆ ಇರುವ ತಾತ್ಸಾರ ಧೋರಣೆಯನ್ನು ಪ್ರತಿಬಿಂಬಿಸಿದೆ. ಪಿಎಸ್‌ಐ ಹುದ್ದೆ ಆಕಾಂಕ್ಷಿಗಳ ಬೇಡಿಕೆ ನ್ಯಾಯ ಸಮ್ಮತವಾಗಿದೆ. ಅವರ ನ್ಯಾಯಯುತ ಬೇಡಿಕೆಗಳನ್ನು ಬಿಜೆಪಿ ಬೆಂಬಲಿಸುತ್ತದೆ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT