ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರು ಹೆದ್ದಾರಿಗಳಲ್ಲಿ ಎ.ಐ ಕ್ಯಾಮೆರಾ ಕಣ್ಗಾವಲು

ಸಂಚಾರ ನಿಯಮ ಉಲ್ಲಂಘಿಸಿದ್ದರೆ ದಂಡ ಪ್ರಯೋಗ
Published 4 ಅಕ್ಟೋಬರ್ 2023, 0:16 IST
Last Updated 4 ಅಕ್ಟೋಬರ್ 2023, 0:16 IST
ಅಕ್ಷರ ಗಾತ್ರ

ಬೆಂಗಳೂರು: ವಾಹನಗಳ ಅತಿಯಾದ ವೇಗ ಹಾಗೂ ಸಂಚಾರ ನಿಯಮ ಉಲ್ಲಂಘನೆ ಮೇಲೆ ಕಣ್ಗಾವಲು ಇಡಲು ರಾಜ್ಯದ ಪ್ರಮುಖ ಹೆದ್ದಾರಿಗಳಲ್ಲಿ ಎ.ಐ (ಕೃತಕ ಬುದ್ಧಿಮತ್ತೆ) ಕ್ಯಾಮೆರಾ ಅಳವಡಿಸಲು ಸಾರಿಗೆ ಇಲಾಖೆ ಮುಂದಾಗಿದೆ.

ಈ ತಿಂಗಳ ಅಂತ್ಯದ ವೇಳೆಗೆ ಆರು ಹೆದ್ದಾರಿಗಳಲ್ಲಿ ಪ್ರಾಯೋಗಿಕವಾಗಿ ಈ ಯೋಜನೆ ಅನುಷ್ಠಾನಕ್ಕೆ ಬರಲಿದೆ. ಸಂಚಾರ ನಿಯಮ ಉಲ್ಲಂಘಿಸಿದ್ದರೆ ವಾಹನದ ಮಾಲೀಕರಿಗೆ ದಂಡ ಸಹ ಬೀಳಲಿದೆ.

ಬೆಂಗಳೂರು–ಮೈಸೂರು ಹೆದ್ದಾರಿ, ರಾಷ್ಟ್ರೀಯ ಹೆದ್ದಾರಿ–4ರ ಪಾರ್ಲೆ–ಜಿ ಕಾರ್ಖಾನೆ ಬಳಿ, ತುಮಕೂರಿನ ಕ್ಯಾತ್ಸಂದ್ರ, ರಾಷ್ಟ್ರೀಯ ಹೆದ್ದಾರಿ 7ರ ದೇವನಹಳ್ಳಿ ಟೋಲ್‌ಗೇಟ್‌, ಹೊಸೂರು ರಸ್ತೆಯ ಅತ್ತಿಬೆಲೆ ಹಾಗೂ ರಾಷ್ಟ್ರೀಯ ಹೆದ್ದಾರಿ 73ರ ಹಿಟ್ನಾಳ ಟೋಲ್‌ಗೇಟ್‌ ಬಳಿ ಎ.ಐ ಕ್ಯಾಮೆರಾ ಅಳವಡಿಸಲು ಇಲಾಖೆ ತೀರ್ಮಾನಿಸಿದೆ.

ಇತ್ತೀಚೆಗೆ ಹೆದ್ದಾರಿಗಳಲ್ಲಿ ಅಪಘಾತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿವೆ. ವಾಹನಗಳ ಅತಿಯಾದ ವೇಗದಿಂದ ಸಾವು ಸಂಭವಿಸುತ್ತಿವೆ. ವಾಹನಗಳ ವೇಗ ತಗ್ಗಿಸಲು ಈ ಕ್ರಮ ಕೈಗೊಳ್ಳಲಾಗಿದೆ.

ವಾಹನ ಸಂಚಾರ ನಿಯಮ ಉಲ್ಲಂಘನೆ ಹಾಗೂ ಅಪಘಾತಗಳ ಪ್ರಕರಣ ಹೆಚ್ಚಿರುವ ಹೆದ್ದಾರಿಗಳನ್ನು ಮೊದಲ ಹಂತದಲ್ಲಿ ಆಯ್ಕೆ ಮಾಡಿಕೊಳ್ಳಲಾಗಿದೆ. ಎ.ಐ (ಕೃತಕ ಬುದ್ಧಿಮತ್ತೆ) ಕ್ಯಾಮೆರಾ ಅಳವಡಿಕೆ ಕಾರ್ಯ ಆರಂಭವಾಗಿದೆ. ಇದು ಫಲ ನೀಡಿದರೆ ರಾಜ್ಯದಾದ್ಯಂತ ಅಪಘಾತ ವಲಯಗಳಲ್ಲಿ ಕ್ಯಾಮೆರಾ ಅಳವಡಿಸುವ ಆಲೋಚನೆಯಲ್ಲಿ ಸಾರಿಗೆ ಇಲಾಖೆ ಇದೆ.

ವಾಹನಗಳ ವೇಗದ ವಿವರದ ಪ್ರದರ್ಶನಕ್ಕೆ ಡಿಜಿಟಲ್‌ ಡಿಸ್‌ಪ್ಲೇ ಬೋರ್ಡ್‌ನ ವ್ಯವಸ್ಥೆ ಮಾಡಲಾಗುವುದು. ಈ ಕ್ಯಾಮೆರಾಗಳು ವಾಹನಗಳ ವೇಗ, ಚಾಲಕರು ಸೀಟ್‌ ಬೆಲ್ಟ್‌ ಧರಿಸದಿರುವುದೂ ಸೇರಿದಂತೆ ಸಂಚಾರ ನಿಯಮ ಉಲ್ಲಂಘನೆಗೆ ಸಂಬಂಧಿಸಿದ ದೃಶ್ಯಾವಳಿಯನ್ನು ಸೆರೆ ಹಿಡಿಯಲಿವೆ. 200 ಮೀಟರ್‌ ದೂರದವರೆಗಿರುವ ದೃಶ್ಯವೂ ಸೆರೆಯಾಗಲಿದೆ.

ಎ.ಐ ಕ್ಯಾಮೆರಾಗಳನ್ನು ಸಾರಿಗೆ ಇಲಾಖೆಯ ವೆಬ್‌ ಆಧಾರಿತ ಸಾರಥಿ–4 ಮತ್ತು ವಾಹನ್‌–4 ತಂತ್ರಾಂಶದ ಜತೆ ಜೋಡಣೆ ಮಾಡಲಾಗುವುದು. ನಿಯಮ ಉಲ್ಲಂಘನೆಯಾಗಿದ್ದರೆ ವಾಹನದ ನೋಂದಣಿ ಸಂಖ್ಯೆ ಕ್ಯಾಮೆರಾದಲ್ಲಿ ಸೆರೆಯಾಗಲಿದೆ. ಇಲಾಖೆ ಅಧಿಕಾರಿಗಳಿಗೂ ಮಾಹಿತಿ ಲಭಿಸಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT