ಹುಬ್ಬಳ್ಳಿ:ಮುಂದಿನ ತಿಂಗಳು ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎಂಬ ವದಂತಿಗಳ ಕುರಿತು ಧಾರವಾಡ ಜಿಜೆಪಿ ಶಾಸಕ ಹಾಗೂ ಕಳೆದ ಬಾರಿ ಸಿಎಂ ರೇಸ್ನಲ್ಲಿದ್ದ ಅರವಿಂದ ಬೆಲ್ಲದ ಹುಬ್ಬಳ್ಳಿಯಲ್ಲಿಂದು ಪ್ರತಿಕ್ರಿಯೆ ನೀಡಿದ್ದಾರೆ.

'ಎಲ್ಲರಿಗೂ ಸಚಿವರಾಗುವ ಇಚ್ಛೆ ಇರುತ್ತದೆ. ಆದರೆ, ಆ ಸ್ಥಾನಗಳು ಸೀಮಿತ ಇರುವುದರಿಂದ ಎಲ್ಲರಿಗೂ ಅವಕಾಶ ಸಿಗುವುದಿಲ್ಲ. ನನ್ನ ವಿಷಯದಲ್ಲಿ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ' ಎಂದು ಮಾಧ್ಯಮದವರು ಕೇಳಿದ ಸಚಿವ ಸ್ಥಾನದ ಆಕಾಂಕ್ಷಿಯೇ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

'ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕ್ರಿಯಾಶೀಲವಾಗಿ ಆಡಳಿತ ನಡೆಸುತ್ತಿದ್ದಾರೆ. ಅವರೊಬ್ಬ ಪ್ರಬುದ್ಧ ಉತ್ತಮ ಆಡಳಿತಗಾರ. ಸಚಿವ ಕೆ.ಎಸ್. ಈಶ್ವರಪ್ಪ ಅವರು ತಮ್ಮ ಹೇಳಿಕೆ ಕುರಿತು ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಉನ್ನತ ಶೈಕ್ಷಣಿಕ ಹಿನ್ನೆಲೆ ಇದ್ದವರೇ ಆಡಳಿತದ ಚುಕ್ಕಾಣಿ ಹಿಡಿಯಬೇಕು ಎನ್ನುವುದಕ್ಕಿಂತ, ಅದಕ್ಕೆ ರಾಜಕೀಯ ಅನುಭವ ಸಾಕಷ್ಟು ಇರಬೇಕು' ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.