ಬೆಂಗಳೂರು: ಖಾಸಗಿ ವ್ಯವಸ್ಥೆಯಡಿ ಸಾವಿರಾರು ರೂಪಾಯಿ ವೆಚ್ಚದ ಕ್ಯಾಟರಾಕ್ಟ್ (ಕಣ್ಣಿನ ಪೊರೆ) ಶಸ್ತ್ರಚಿಕಿತ್ಸೆಯನ್ನು ‘ಆಶಾಕಿರಣ’ ಯೋಜನೆಯಡಿ ಉಚಿತವಾಗಿ ನಡೆಸ
ಲಾಗುತ್ತಿದ್ದು, ದೃಷ್ಟಿ ಸಮಸ್ಯೆ ಎದುರಿಸುತ್ತಿ ದ್ದವರಲ್ಲಿ 5 ಲಕ್ಷಕ್ಕೂ ಅಧಿಕ ಮಂದಿಗೆ ಈ ಶಸ್ತ್ರಚಿಕಿತ್ಸೆ ಬೆಳಕಾಗಿದೆ.

ಮಧುಮೇಹಿಗಳು ಹಾಗೂ 40 ವರ್ಷ ಮೇಲ್ಪಟ್ಟವರಲ್ಲಿ ಹೆಚ್ಚಾಗಿ ಕಣ್ಣಿನ ಪೊರೆ ಕಾಣಿಸಿಕೊಳ್ಳುತ್ತಿದೆ. ಪ್ರಾರಂಭಿಕ ಹಂತದಲ್ಲಿಯೇ ಸಮಸ್ಯೆ ಯನ್ನು ಪತ್ತೆ ಮಾಡದಿದ್ದಲ್ಲಿ, ದೃಷ್ಟಿ ಮಸುಕಾಗಲಿದೆ. ಕಣ್ಣಿನ ಪೊರೆ ಸಮಸ್ಯೆಗೆ ಶಸ್ತ್ರಚಿಕಿತ್ಸೆಯೊಂದೆ ಪರಿಹಾರವಾಗಿದೆ. ಖಾಸಗಿ ವ್ಯವಸ್ಥೆಯಡಿ ಈ ಶಸ್ತ್ರಚಿಕಿತ್ಸೆ ದುಬಾರಿಯಾಗಿದ್ದು, ಕಣ್ಣೊಂದಕ್ಕೆ ಕೃತಕ ಮಸೂರ ಅಳವಡಿಸಲು ₹ 1.5 ಲಕ್ಷದವರೆಗೂ ಪಡೆಯಲಾಗುತ್ತಿದೆ. ಇದರಿಂದಾಗಿ ಹಲವರು ದೃಷ್ಟಿ ದೋಷದ ನಡುವೆಯೇ ಜೀವನ ಸಾಗಿಸುತ್ತಿದ್ದಾರೆ. ಅಂತಹವರ ಕಣ್ಣಿನ ಆರೋಗ್ಯ ಬಲವರ್ಧನೆಯ ಉದ್ದೇಶದಿಂದ ಆರೋಗ್ಯ ಇಲಾಖೆ ಆಶಾಕಿರಣ ಯೋಜನೆ ರೂಪಿಸಿದೆ. ಮೂರು ವರ್ಷಗಳಲ್ಲಿ 4.45 ಲಕ್ಷ ಫಲಾನುಭವಿಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. 71 ಸಾವಿರ ಮಂದಿ ಸರ್ಕಾರಿ ವ್ಯವಸ್ಥೆಯಡಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.

ಡಿಜಿಟಲ್ ಸಾಧನಗಳ ಅತಿಯಾದ ಬಳಕೆ, ವಾಯು ಮಾಲಿನ್ಯ ಸೇರಿ ವಿವಿಧ ಕಾರಣಗಳಿಂದ ಚಿಕ್ಕ ವಯಸ್ಸಿನಲ್ಲಿಯೇ ದೃಷ್ಟಿ ದೋಷ ಸಮಸ್ಯೆಗೆ ಒಳಪಡುವವರ ಸಂಖ್ಯೆ ರಾಜ್ಯದಲ್ಲಿ ಹೆಚ್ಚಳವಾಗುತ್ತಿದೆ. ಮಕ್ಕಳು ಹಾಗೂ ವಯಸ್ಕರಲ್ಲಿಯೂ ಕಣ್ಣಿನ ಪೊರೆ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಚಿಕಿತ್ಸೆ ವಿಳಂಬವಾದಲ್ಲಿ ಸಮಸ್ಯೆ ಗಂಭೀರ ಸ್ವರೂಪ ಪಡೆದು, ದೃಷ್ಟಿ ನಷ್ಟವಾಗುವ ಸಾಧ್ಯತೆಯಿರುತ್ತದೆ. ಆದ್ದರಿಂದ ಆರಂಭಿಕ ಹಂತದಲ್ಲಿಯೇ ನೇತ್ರ ಸಮಸ್ಯೆ ಪತ್ತೆ ಮಾಡಿ, ಚಿಕಿತ್ಸೆ ಒದಗಿಸುವ ಉದ್ದೇಶದಿಂದ ರಾಷ್ಟ್ರೀಯ ಅಂಧತ್ವ ಮತ್ತು ದೃಷ್ಟಿಮಾಂದ್ಯತೆ ನಿಯಂತ್ರಣ ಕಾರ್ಯಕ್ರಮದಡಿ 2022ರಲ್ಲಿ ಈ ಯೋಜನೆ ಪ್ರಾರಂಭಿಸಲಾಗಿದೆ.

ಕಣ್ಣಿನ ತಪಾಸಣೆ: ಯೋಜನೆಯಡಿ ಮೊದಲೆರಡು ಹಂತದಲ್ಲಿ ಆಯ್ದ ಜಿಲ್ಲೆಗಳಲ್ಲಿ ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಿ, ನೇತ್ರ ತಪಾಸಣೆ ನಡೆಸಿ ಸಮಸ್ಯೆ ಪತ್ತೆ ಮಾಡಿದ್ದರು. 2025ರ ಜುಲೈನಲ್ಲಿ ಈ ಯೋಜನೆಯನ್ನು ಮರುವಿನ್ಯಾಸ ಮಾಡಿ, ಜಿಲ್ಲಾ ಆಸ್ಪತ್ರೆಗಳು, ತಾಲ್ಲೂಕು ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳು ಹಾಗೂ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ 393 ‘ಆಶಾಕಿರಣ ದೃಷ್ಟಿ ಕೇಂದ್ರ’ಗಳನ್ನು ಸ್ಥಾಪಿಸಿ, ಅಲ್ಲಿ ತಪಾಸಣೆ ನಡೆಸಲಾಗುತ್ತಿದೆ.

‘ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಶಸ್ತ್ರಚಿಕಿತ್ಸೆಯನ್ನೂ ನಡೆಸಲಾಗುತ್ತಿದೆ. ಕಣ್ಣಿನ ಪೊರೆ ಸಮಸ್ಯೆ ದೃಢಪಟ್ಟಲ್ಲಿ ಉನ್ನತ ಆರೋಗ್ಯ ಕೇಂದ್ರಗಳಿಗೆ ಶಿಫಾರಸು ಮಾಡಲಾಗುತ್ತಿದ್ದು, ಅಲ್ಲಿ ಹೆಚ್ಚಿನ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಆಸ್ಪತ್ರೆಗಳಲ್ಲಿ ಶಾಶ್ವತ ದೃಷ್ಟಿ ಕೇಂದ್ರಗಳನ್ನು ಸ್ಥಾಪಿಸಿರುವುದರಿಂದ, ಸಾರ್ವಜನಿಕರು ಹತ್ತಿರದ ಕೇಂದ್ರಗಳಿಗೆ ತೆರಳಿ ತಪಾಸಣೆ ಮಾಡಿಸಿಕೊಳ್ಳಲು ಸಾಧ್ಯವಾಗುತ್ತಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ಆಶಾಕಿರಣ ದೃಷ್ಟಿ ಕೇಂದ್ರ: 2.72 ಕೋಟಿ ಮಂದಿಗೆ ತಪಾಸಣೆ

ರಾಜ್ಯದಲ್ಲಿ 2022ರಲ್ಲಿ ಆರಂಭವಾದ ಆಶಾಕಿರಣ ಕಾರ್ಯಕ್ರಮವನ್ನು ಎರಡು ಹಂತಗಳಲ್ಲಿ, 8 ಜಿಲ್ಲೆಗಳಲ್ಲಿ ಜಾರಿಗೊಳಿಸಲಾಗಿತ್ತು. ಮೊದಲಿಗೆ ಮನೆ ಮನೆ ಪ್ರಚಾರ ನಡೆಸಿ, ಕಣ್ಣಿನ ತಪಾಸಣೆ ಮಾಡುವ ಜತೆಗೆ ಅಗತ್ಯ ಇರುವವರಿಗೆ ಉಚಿತ ಕನ್ನಡಕ ವಿತರಣೆ, ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಕ್ರಮವಹಿಸಲಾಗಿತ್ತು. ಮೊದಲೆರಡು ಹಂತಗಳಲ್ಲಿ 1.40 ಕೋಟಿ ಜನರು ಪ್ರಾಥಮಿಕ ನೇತ್ರ ತಪಾಸಣೆಗೆ ಒಳಗಾಗಿದ್ದರು. ಅವರಲ್ಲಿ 24.50 ಲಕ್ಷ ಜನರಲ್ಲಿ ಕಣ್ಣಿನ ತೊಂದರೆ ಇರುವುದು ಪತ್ತೆಯಾಗಿತ್ತು. ಈಗ ಆಶಾಕಿರಣ ದೃಷ್ಟಿ ಕೇಂದ್ರಗಳಲ್ಲಿ ತಪಾಸಣೆ ಮಾಡಲಾಗುತ್ತಿದ್ದು, ಯೋಜನೆ ಪ್ರಾರಂಭವಾದಾಗಿನಿಂದ ಈವರೆಗೆ 2.75 ಕೋಟಿ ಮಂದಿಗೆ ತಪಾಸಣೆ ನಡೆಸಲಾಗಿದೆ.

3.03 ಲಕ್ಷ ಜನರಿಗೆ ಕನ್ನಡಕ

ದೃಷ್ಟಿ ಸಮಸ್ಯೆ ಎದುರಿಸುತ್ತಿರುವವರಿಗೆ ಈ ಯೋಜನೆಯಡಿ ಉಚಿತವಾಗಿ ಕನ್ನಡಕಗಳನ್ನೂ ವಿತರಿಸಲಾಗುತ್ತಿದೆ. ತಪಾಸಣೆಗೆ ಒಳಪಟ್ಟವರಲ್ಲಿ 3.03 ಲಕ್ಷ ಜನರಿಗೆ ಕನ್ನಡಕ ನೀಡಲಾಗಿದೆ. ಆಶಾಕಿರಣ ದೃಷ್ಟಿ ಕೇಂದ್ರಗಳಲ್ಲಿ ನೇತ್ರಾಧಿಕಾರಿಗಳು ಪರಿಶೀಲಿಸಿ, ಕನ್ನಡಕ ಒದಗಿಸುತ್ತಿದ್ದಾರೆ. ಮಕ್ಕಳಲ್ಲಿನ ದೃಷ್ಟಿ ಸಮಸ್ಯೆಗೆ ಸಂಬಂಧಿಸಿದಂತೆ ಇಲಾಖೆಯ ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದಡಿ (ಆರ್ಬಿಎಸ್ಕೆ) ತಪಾಸಣೆ ನಡೆಸ ಲಾಗುತ್ತಿದೆ. ಸಮಸ್ಯೆ ಪತ್ತೆಯಾದ ಮಕ್ಕಳಿಗೆ ಹೆಚ್ಚಿನ ನೇತ್ರ ತಪಾಸಣೆ ನಡೆಸಿ, ಕನ್ನಡಕಗಳನ್ನೂ ವಿತರಿಸಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.